ಬೆಂಗಳೂರು: ರಸ್ತೆ ಬದಿ ಹಾಗೂ ಮನೆಯ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಯಪ್ಪನಹಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಾಣಸವಾಡಿ ನಿವಾಸಿಗಳಾದ ಆನಂದ್, ರಜನಿ ಹಾಗೂ ಪುಷ್ಪರಾಜ್ ಬಂಧಿತರು.

ಆನಂದ ವಿರುದ್ಧ ಈ ಹಿಂದೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಹೇಳಿದರು. ಬಂಧಿತರಿಂದ ₹24.85 ಲಕ್ಷ ಮೌಲ್ಯದ 19 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಜೂನ್ 12ರಂದು ನಾಗವಾರಪಾಳ್ಯದ ಮುಖ್ಯರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ಬೈಕ್‌ವೊಂದನ್ನು ಆರೋಪಿಗಳು ಕಳವು ಮಾಡಿದ್ದರು. ಬೈಕ್ ಮಾಲೀಕರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಬೆನ್ನಿಗಾನಹಳ್ಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.

ಕದ್ದ ದ್ವಿಚಕ್ರ ವಾಹನಗಳನ್ನು ತಮಿಳುನಾಡಿನ ತಿರಪತ್ತೂರು ಹಾಗೂ ಅರಕ್ಕೋಣಂನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.