ಬೆಂಗಳೂರು: ಹೀರೊ ಹೋಂಡಾ ಸ್ಪ್ಲೆಂಡರ್ ಬೈಕ್ ಕದ್ದು, ಅದರಲ್ಲೇ ಆಹಾರ ಪೂರೈಕೆ ಮಾಡುತ್ತಿದ್ದ ಡೆಲಿವರಿ ಬಾಯ್ ಒಬ್ಬರನ್ನು ಕೆ.ಆರ್. ಪುರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ವೇಳೆಯೇ ಡೆಲಿವರಿ ಬಾಯ್ ಮೊಬೈಲ್ನಲ್ಲಿ ಮಾತನಾಡುತ್ತ ಬೈಕ್ ಚಲಾಯಿಸಿಕೊಂಡು ಹೊರಟಿದ್ದರು. ಅದನ್ನು ಗಮನಿಸಿದ್ದ ಸಿಬ್ಬಂದಿ ತಡೆದು ನಿಲ್ಲಿಸಿ ವಾಹನಗಳ ದಾಖಲೆ ಪರಿಶೀಲನೆ ನಡೆಸಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಡೆಲಿವರಿ ಬಾಯ್ ಬಳಿ ಸೂಕ್ತ ದಾಖಲೆಗಳು ಇರಲಿಲ್ಲ. ಬೈಕ್ ನೋಂದಣಿ ಸಂಖ್ಯೆ ಆಧರಿಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕದ್ದಿದ್ದ ಬೈಕ್ ಎಂಬುದು ಗೊತ್ತಾಗಿದೆ. ಡೆಲಿವರಿ ಬಾಯ್ನನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಠಾಣೆ ಪೊಲೀಸರ ಸುಪರ್ದಿಗೆ ನೀಡಲಾಗಿದೆ’ ಎಂದೂ ತಿಳಿಸಿವೆ.

‘ಬೈಕ್ ಯಾರದ್ದು? ಅದನ್ನು ಹೇಗೆ ಕದ್ದರು ? ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.