ಬೆಂಗಳೂರು: ಮೂರು ವರ್ಷಗಳಿಂದ 36 ಕಡೆ ಮಹಿಳೆಯರ ಸರಗಳವು ಮಾಡಿದ್ದ ಆರೋಪಿ ಅಬುಜಾರ್ ಅಲಿ ಎಂಬುವರನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಅಬುಜಾರ್, ಇರಾನಿ ತಂಡದ ಸದಸ್ಯ. ಹುಬ್ಬಳ್ಳಿ–ಧಾರವಾಡದಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಇತ್ತೀಚೆಗೆ ಬಂಧಿಸಿ ನಗರಕ್ಕೆ ಕರೆತರಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆಗಾಗ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ಪಲ್ಸರ್ ಬೈಕ್‌ನಲ್ಲಿ ಸುತ್ತಾಡುತ್ತಿದ್ದ. ವಾಯುವಿಹಾರ ಮಾಡುವ ಹಾಗೂ ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ಯುತ್ತಿದ್ದ. ನಗರದ ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಮೂರು ವರ್ಷದಿಂದ ಕೃತ್ಯ ಎಸಗಿದ್ದ’ ಎಂದು ತಿಳಿಸಿದರು.

‘ಸರಗಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡು, ಕೆಲ ಪುರಾವೆಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸುತ್ತಿದ್ದ ಸಹಚರರು ತಲೆಮರೆಸಿಕೊಂಡಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.