ಬೆಂಗಳೂರು: ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿ ನಗದು ಕಳವು ಮಾಡಲಾಗಿದ್ದು ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯಾ ಲೇಔಟ್‌ನಲ್ಲಿ ಕಸ್ತೂರಿ ಶೆಟ್ಟಿ ಅವರ ಮನೆಯಿದೆ. ಮನೆ ಬೀರುವಿನಲ್ಲಿ ಇಡಲಾಗಿದ್ದ ₹2.5 ಲಕ್ಷ ನಗದು ಕಳವು ಮಾಡಲಾಗಿದೆ.

‘ಡಿ.31ರಂದು ಮಧ್ಯಾಹ್ನ ಹಣ ತಂದು ಬೀರುವಿನಲ್ಲಿಟ್ಟಿದ್ದೆ. ಸಂಜೆ ನೋಡಿದಾಗ ಹಣ ಇರಲಿಲ್ಲ ಎಂದು ದೂರು ನೀಡಿದ್ದಾರೆ. ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರ ಮೇಲೆ ಅನುಮಾನಗೊಂಡು, ದೂರು ನೀಡಿದ್ದಾರೆ. ಆರು ತಿಂಗಳಿಂದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ರತ್ನಮ್ಮ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.