ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಾಗ್ರಾಮ: ‘ಚೋಖಿ ಧನಿ’ ಮಾದರಿ ನನೆಗುದಿಗೆ

ಖಾಸಗಿ ಸಂಸ್ಥೆ ಸಹಯೋಗದಲ್ಲಿ ಅಭಿವೃದ್ಧಿಗೆ ಮುಂದಾಗಿದ್ದ ಸಂಸ್ಕೃತಿ ಇಲಾಖೆ‌
Published : 18 ಜುಲೈ 2023, 21:15 IST
Last Updated : 18 ಜುಲೈ 2023, 21:15 IST
ಫಾಲೋ ಮಾಡಿ
Comments
ನಾನು ಅಧಿಕಾರವಹಿಸಿಕೊಂಡು ಮೂರು ತಿಂಗಳಾಗಿವೆ. ಮಲ್ಲತ್ತಹಳ್ಳಿಯ ಕಲಾಗ್ರಾಮ ಅಭಿವೃದ್ಧಿ ಯೋಜನೆ ಏನಾಗಿದೆ ಎನ್ನುವುದರ ಬಗ್ಗೆ ಪರಿಶೀಲಿಸುತ್ತೇನೆ.
- ವಿಶ್ವನಾಥ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ
ಥೀಮ್ ಪಾರ್ಕ್‌ಗಿಲ್ಲ ಆದ್ಯತೆ
ಕಲಾಗ್ರಾಮದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ವಿಭಾಗ ಶಿಲ್ಪಕಲಾ ಅಕಾಡೆಮಿಯ ಗ್ಯಾಲರಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ ನಾಲ್ಕು ಬಯಲು ರಂಗಮಂದಿರಗಳು ಹಾಗೂ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಇವೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಆಡಳಿತ ಕಚೇರಿ ತಲೆಯೆತ್ತುತ್ತಿದೆ. ಈ ಪ್ರದೇಶದಲ್ಲಿ ಥೀಮ್ ಪಾರ್ಕ್ ನಿರ್ಮಿಸಬೇಕೆಂಬ ಪ್ರಸ್ತಾವ ಇಲಾಖೆಯ ಮುಂದಿತ್ತು. ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ತನ್ನ ಕೊನೆಯ ಬಜೆಟ್‌ನಲ್ಲಿಯೂ ಇಲ್ಲಿ ‘ಥೀಮ್ ಪಾರ್ಕ್’ ನಿರ್ಮಿಸುವುದಾಗಿ ಘೋಷಿಸಿತ್ತು. ಆದರೆ ಅನುದಾನದ ಬಗ್ಗೆ ಉಲ್ಲೇಖಿಸಿರಲಿಲ್ಲ. ನೂತನ ಸರ್ಕಾರಕ್ಕೆ ಸಂಸ್ಕೃತಿ ಇಲಾಖೆಯು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಥೀಮ್ ಪಾರ್ಕ್‌ ನಿರ್ಮಾಣದ ಪ್ರಸ್ತಾವವನ್ನು ಕೈಬಿಟ್ಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT