ಬೆಂಗಳೂರು: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ನಿಕಟಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ ಪಾತ್ರ ಕಂಡುಬಂದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು,‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆಯ ಆರ್. ಮಂಜುನಾಥ್ ಎಂಬವರು ನೀಡಿದ್ದ ದೂರು ಆಧರಿಸಿ ಐಜಿಪಿ ಅವರಿಂದ ತನಿಖೆ ನಡೆಸಲಾಗಿದೆ‘ ಎಂದರು.

‘ವಿಜಯಪುರ ಸರ್ಕಲ್ ಇನ್ಸ್ಪೆಕ್ಟರ್ ಟಿ.ಶ್ರೀನಿವಾಸ್, ಎಎಸ್ಐಗಳಾದ ಎನ್. ಶುಭಾ, ಕೆ.ಜಿ. ಅನಿತ ಎಂಬವರ ವಿರುದ್ಧ ದೂರು ಕೇಳಿಬಂದಿತ್ತು. ಈ ಅಧಿಕಾರಿಗಳ ದೂರವಾಣಿಕರೆ ಮಾಹಿತಿ ಪಡೆಯಲಾಗಿದೆ. ಕ್ರಷರ್ ಮಾಲೀಕರಿಗೆ ಸಹಾಯ ಮಾಡುವ ಮಾತುಕತೆ ನಡೆಸಿ, ನಂಬಿಸಿ ₹ 5 ಲಕ್ಷ ಪಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕಾರಣಕ್ಕೆ ಟಿ. ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಎಎಸ್ಐಗಳ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ. ವಿಚಾರಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ’ ಎಂದರು.

ದಕ್ಷಿಣ ರೈಲ್ವೆಗೆ ₹59 ಕೋಟಿ, ಉತ್ತರಕ್ಕೆ ₹13,200 ಕೋಟಿ: ಕನಿಮೋಳಿ ತರಾಟೆ

ಆದರೆ, ಇದನ್ನು ಒಪ್ಪದ ರವಿಕುಮಾರ್, ‘ನನ್ನ ಬಳಿ ಪುರಾವೆಗಳಿವೆ’ ಎಂದರು.ಆಗ ಅದನ್ನು ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ಪಕ್ಷದಲ್ಲಿ ಒಳ್ಳೆಯದಾದರೆ ನಂದು, ಕೆಟ್ಟದ್ದಾದರೆ ನಿಂದು ಎನ್ನುವವರಿದ್ದಾರೆ: ಖರ್ಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.