ಬೆಂಗಳೂರು: ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ನ ಎಟಿಎಂ ಕೇಂದ್ರಕ್ಕೆ ನುಗ್ಗಿದ ದರೋಡೆಕೋರರು, ಎಟಿಎಂ ಯಂತ್ರ ಧ್ವಂಸಗೊಳಿಸಿ ₹16.56 ಲಕ್ಷ ದರೋಡೆ ಮಾಡಿಕೊಂಡು ಪರಾರಿ ಆಗಿದ್ದಾರೆ.

‘ಮುಖಕ್ಕೆ ಬೆಡ್ಶೀಟ್ ಸುತ್ತಿಕೊಂಡು ಎಟಿಎಂ ಕೇಂದ್ರಕ್ಕೆ ನುಗ್ಗಿ ದರೋಡೆ ನಡೆಸಲಾಗಿದೆ. ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತನಿಖಾ ತಂಡ ರಚಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಸ್ಪ್ರೇ:
‘ಭಾನುವಾರ ಬೆಳಿಗ್ಗೆ 6 ಗಂಟೆಗೆ ಸುಮಾರಿಗೆ ದರೋಡೆಕೋರರು ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಬಳಿಕ, ಕೇಂದ್ರದಲ್ಲಿರುವ ಎರಡು ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣದ ಸ್ಪ್ರೇ ಸಿಂಪಡಿಸಿದ್ದಾರೆ. ಗ್ಯಾಸ್ ಕಟರ್ನಿಂದ ಎಟಿಎಂ ಯಂತ್ರದ ಕ್ಯಾಶ್ ಬಾಕ್ಸ್ ತೆರೆದು, ಅದರಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಆರೋಪಿಗಳು ಬೆಡ್ಶೀಟ್ ಸುತ್ತಿಕೊಂಡು ಎಟಿಎಂ ಕೇಂದ್ರಕ್ಕೆ ನುಗ್ಗಿರುವುದು, ಸಿಸಿಟಿವಿ ಕ್ಯಾಮೆರಾಕ್ಕೆ ಆರೋಪಿಗಳು ಕಪ್ಪು ಬಣ್ಣದ ಸ್ಪ್ರೇ ಸಿಂಪಡಿಸಿರುವುದು, ಕ್ಯಾಮೆರಾಗಳಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಉತ್ತರ ಭಾರತ ಮೂಲದ ಇಬ್ಬರು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳು ಬಂದಿದ್ದ ಕಾರಿನ ಮಾಹಿತಿ ಪತ್ತೆ ಹಚ್ಚಿದಾಗ ಅದು ಸಹ ಕಳವು ನಡೆಸಿರುವುದೆಂದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.