ಕೆ.ಆರ್.ಪುರ: ವರ್ತೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವಿಗೀಡಾಗಿವೆ.

ಕೆರೆಯಲ್ಲಿನ ನೀರು ಕಲುಷಿತವಾಗಿದ್ದರಿಂದ ಮೀನುಗಳು ಮೃತಪಟ್ಟಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸತ್ತ ಮೀನುಗಳನ್ನು ಕೆರೆಯಿಂದ ಹೊರತೆಗೆದು ಗುಂಡಿ ತೆಗೆದು ಮುಚ್ಚಲಾಗುತ್ತಿದೆ.

ಕಳೆದ ವಾರ ಸುರಿದ ಮಳೆಯಿಂದ ಚರಂಡಿ ನೀರು ಕೆರೆಗೆ ಹರಿದು ನೀರು ಕಲುಷಿತಗೊಂಡಿತ್ತು. ನೀರೆಲ್ಲ ಕಪ್ಪು ಬಣ್ಣಕ್ಕೆ ತಿರುಗಿತ್ತು. ರಾಸಾಯನಿಕಗಳ ಮಿಶ್ರಣ ಹಾಗೂ ಆಮ್ಲಜನಕ ಕೊರತೆಯಿಂದಾಗಿ ಮೀನುಗಳು ಸತ್ತಿರಬಹುದು ಎಂದು ಶಂಕಿಸಲಾಗಿದೆ.

ಬಿಡಿಎ ಮತ್ತು ಬಿಬಿಎಂಪಿ ನಿರ್ವಹಣೆಯಲ್ಲಿರುವ ಈ ಕೆರೆಯ ಬಗ್ಗೆ ನಿರ್ಲಕ್ಷ್ಯ ಧೋರಣೆಯಿಂದ ಮೀನುಗಳ ಸಾವಿಗೀಡಾಗಿವೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

ಇಂತಹ ಪ್ರಕರಣಗಳು ಮರುಕಳಿಸುತ್ತಿದ್ದರೂ ಬಿಡಿಎ ಅಧಿಕಾರಿಗಳಾಗಲಿ, ಪಾಲಿಕೆ ಅಧಿಕಾರಿಗಳಾಗಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿಲ್ಲ. ಕೆರೆ ಅಭಿವೃದ್ದಿಗಾಗಿ ಕೋಟ್ಯಂತರ ಮೊತ್ತ ಮೀಸಲಿಡಲಾಗಿದೆ. ಆದರೂ ಸ್ವಚ್ಛತೆ ಮರೀಚಿಕೆಯಾಗಿದೆ. ಕೆರೆ ನಿರ್ವಹಣೆ ಸಮರ್ಪಕವಾಗಿಲ್ಲ. ಕೆರೆಗೆ ಸಿಸಿ ಟಿವಿ ಕ್ಯಾಮೆರಾಗಳು ಅಳವಡಿಸಿಲ್ಲ ಎಂದು ವರ್ತೂರು ನಿವಾಸಿ ಮುನಿರಾಜ್ ದೂರಿದರು.

ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ತ್ಯಾಜ್ಯ ನೀರು ಕೆರೆಗೆ ಸೇರಿದೆ. ಕೆರೆ ಶುದ್ಧೀಕರಣ ಘಟಕ ಇಲ್ಲದೇ ಇರುವುದು ಮುಖ್ಯ ಕಾರಣವಾಗಿದೆ. ಕೆರೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಸಗಿಯವರು ಜೆಸಿಬಿ ಮೂಲಕ ಕೆಲಸ ಮಾಡುವ ವೇಳೆ ಚರಂಡಿ ಒಡೆದು ಕಲುಷಿತ ನೀರು ಕೆರೆ ಸೇರಿದೆ. ಈ ಬಗ್ಗೆ ಬಿಬಿಎಂಪಿ ಹಾಗೂ ಬಿಡಿಎ ಅಧಿಕಾರಿಗಳು ಗಮನ ಹರಿಸಬೇಕಿದೆ ಎಂದು ಸ್ಥಳೀಯ ವರ್ತೂರು ದೀಪಕ್ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.