ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿಗೆ ಆಂಧ್ರಪ್ರದೇಶ ಸರ್ಕಾರವು ನೇಮಿಸಿರುವ ನೂತನ 24 ಸದಸ್ಯರಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಸೇರಿದಂತೆ ಕರ್ನಾಟಕದ ಮೂವರಿಗೆ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ನರೇಶ್ ಕುಮಾರ್ ಹಾಗೂ ದರ್ಶನ್ ಆರ್.ಎನ್. ಅವರನ್ನು ಟಿಟಿಡಿ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಿಸಲಾಗಿದೆ.

‘ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸವಿತಾ ಸಮಾಜಕ್ಕೆ ಟಿಟಿಡಿ ಆಡಳಿತ ಮಂಡಳಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ನಮ್ಮ ಸಮುದಾಯದ ಕುರಿತು ಇರುವ ಅಭಿಪ್ರಾಯವನ್ನು ಬದಲಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತೇನೆ’ ಎಂದು ನರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.