ಬೆಂಗಳೂರು: ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ ‘ಟೊಟೊ ಪುರಸ್ಕಾರ’ಕ್ಕೆ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಯನ್ನು ಟಿ.ಎಫ್.ಎ. (ಟೊಟೊ ಫಂಡ್ಸ್ ದಿ ಆರ್ಟ್ಸ್) ಸ್ಥಾಪಿಸಿದೆ. ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಪುರಸ್ಕಾರವನ್ನು ಸ್ಥಾಪಿಸಲಾಗಿದ್ದು, ₹ 60 ಸಾವಿರ ನಗದು ಬಹುಮಾನ ಒಳಗೊಂಡಿದೆ.

ಭಾರತೀಯ ನಾಗರಿಕರಿಗೆ ಮಾತ್ರ ಅವಕಾಶ ಇರಲಿದ್ದು, ಬರಹಗಾರರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಅಥವಾ ನಾಟಕ ಪ್ರಕಾರದಲ್ಲಿ ಪ್ರವೇಶಗಳನ್ನು ಕಳಿಸಬಹುದು. ಈ ಮೂರು ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ.

ಪ್ರವೇಶಗಳನ್ನು ಕಳುಹಿಸಲು ಸೆ.15 ಕೊನೆಯ ದಿನವಾಗಿದ್ದು, ಪ್ರವೇಶ ಪತ್ರವನ್ನು https://totofundsthearts.org/ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಬರಹ ಮತ್ತು ಪ್ರವೇಶ ಪತ್ರವನ್ನು totokannada@gmail.com ಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.