ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಗೆ ಎರಡು ಹೊಸ ಟ್ರ್ಯಾಕ್ಗಳನ್ನು ಅಳವಡಿಸುವ ಕಾಮಗಾರಿಯನ್ನು ಬಿಡಿಎ ಕೈಗೆತ್ತಿಕೊಂಡಿದ್ದು, ಈ ಭಾಗದಲ್ಲಿ ನಾಲ್ಕು ತಿಂಗಳು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ದಟ್ಟಣೆ ತಪ್ಪಿಸಲು ಸಂಚಾರ ಪೊಲೀಸರು ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಿದ್ದಾರೆ. ಅದೇ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ.

ಕೆ.ಆರ್.ಪುರಂ ಲೂಪ್ ಮುಖ್ಯ ಟ್ರ್ಯಾಕ್ ಬಳಿ ಸೇರುವ ಎರಡು ಸ್ಪ್ಯಾನ್ಗಳನ್ನು ಕಿತ್ತು ಹಾಕಲಾಗಿದೆ. ಇದರಿಂದ ಕೆಆರ್ ಪುರಂ ಲೂಪ್ನಲ್ಲಿ ಮುಂದಿನ ನಾಲ್ಕು ತಿಂಗಳವರೆಗೆ ನಗರದ ಕಡೆಗೆ ಸಂಚಾರ ನಿಧಾನವಾಗಿರಲಿದೆ. ಕೆ.ಆರ್. ಪುರಂ ಕಡೆಯಿಂದ ನಗರದ ಕಡೆಗೆ ಬರುವ ಪ್ರಯಾಣಿಕರು ಪರ್ಯಾಯ ಮಾರ್ಗಗಳಾದ ಐಒಸಿ– ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರಂ ಮೇಲ್ಸೇತುವೆ ಮಾರ್ಗ, ನಾಗವಾರ–ಟ್ಯಾನರಿ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಬಹುದು. ಹೆಗಡೆನಗರ ಥಣಿಸಂದ್ರ ಕಡೆಯಿಂದ ಬರುವ ಜನರು ಜಿಕೆವಿಕೆ ಜಕ್ಕೂರು ರಸ್ತೆಯ ಮೂಲಕ ನಗರ ಪ್ರವೇಶಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಕಡೆಯಿಂದ ಬರುವ ವಾಹನ ದಟ್ಟಣೆ ತಪ್ಪಿಸಲು ಹಾಗೂ ಹೆಬ್ಬಾಳ ಜಂಕ್ಷನ್ನಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಎರಡು ಹೊಸ ಟ್ರ್ಯಾಕ್ಗಳನ್ನು ಅಳವಡಿಸಲು ಬಿಡಿಎ ಪ್ರಸ್ತಾಪಿಸಿತ್ತು. ಬಳಿಕ ತಜ್ಞರ ಜೊತೆಗೆ ಚರ್ಚಿಸಿ ಮೇಲ್ಸೇತುವೆ ವಿಸ್ತರಣೆ ಯೋಜನೆ ರೂಪಿಸಲಾಗಿತ್ತು. ಆ ಕಾಮಗಾರಿಯನ್ನು ಈಗ ಕೈಗೆತ್ತಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.