ಬೆಂಗಳೂರು: ಅರಮನೆ ರಸ್ತೆಯಲ್ಲಿ ನೀರಿನ ಕೊಳವೆ ಜೋಡಣೆಗಾಗಿ ಟೆಂಡರ್ ಶ್ಯೂರ್ ಕಾಮಗಾರಿ ಆರಂಭವಾಗುತ್ತಿದ್ದು, ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ಅರಮನೆ ರಸ್ತೆಯಲ್ಲಿ ಸಂಚರಿಸಬೇಕಿದ್ದ ವಾಹನಗಳ ಓಡಾಟಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.

‘ಬಸವೇಶ್ವರ ವೃತ್ತದಿಂದ (ಚಾಲುಕ್ಯ ವೃತ್ತ) ಮೈಸೂರು ಬ್ಯಾಂಕ್ ವೃತ್ತದ ಕಡೆಗೆ ಹೋಗುವ ವಾಹನಗಳು, ಶೇಷಾದ್ರಿ ರಸ್ತೆಯ ಮಹಾರಾಣಿ ಕಾಲೇಜು ಮೇಲ್ಸೇತುವೆಯ ಎಡಕ್ಕೆ ತಿರುವು ಪಡೆದು, ಕೆ.ಆರ್. ವೃತ್ತ ಹಾಗೂ ಪೋಸ್ಟ್ ಆಫೀಸ್ ರಸ್ತೆ ಮೂಲಕ ಸಾಗಬಹುದು’ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

‘ಮೈಸೂರು ಬ್ಯಾಂಕ್ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವ ವಾಹನಗಳು, ಸೆಂಟ್ರಲ್ ಕಾಲೇಜು ಬಳಿಯಿಂದ ಶೇಷಾದ್ರಿ ರಸ್ತೆಯ ಕೆಳ ಸೇತುವೆ ಮೂಲಕ ಹಾದು ಹೋಗಬಹುದು’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.