ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿದ್ದು, ಸುತ್ತಮುತ್ತಲ ಸ್ಥಳಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗಿದೆ.

ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್ ವೃತ್ತ, ಅರಮನೆ ರಸ್ತೆ, ರೇಸ್ಕೋರ್ಸ್ ರಸ್ತೆ, ಶಿವಾನಂದ ವೃತ್ತ, ಬಸವೇಶ್ವರ ವೃತ್ತ ಹಾಗೂ ಸುತ್ತಮುತ್ತ ವಾಹನಗಳು ನಿಧಾನವಾಗಿ ಚಲಿಸುತ್ತಿವೆ.

ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಅದರ ಜೊತೆಗೆಯೇ ಪಂಚಮಸಾಲಿ ಪ್ರತಿಭಟನೆಯೂ ಇದೆ. ಇದರ ಬಿಸಿ ವಾಹನ ಸವಾರರಿಗೆ ಹಾಗೂ ಪ್ರಯಾಣಿಕರಿಗೆ ತಟ್ಟುತ್ತಿದೆ.

ಖಾಸಗಿ ಶಾಲೆಗಳ ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ, ಶಾಲೆ ವಾಹನಗಳಲ್ಲೇ ಬಂದಿದ್ದಾರೆ. ಇದರಿಂದಾಗಿ ಶಾಲಾ ವಾಹನಗಳೇ ರಸ್ತೆಯಲ್ಲಿ ಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗಿದ್ದು, ಇದು ದಟ್ಟಣೆಗೆ ಕಾರಣವಾಗುತ್ತಿದೆ. ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.