ಬೆಂಗಳೂರು: ‘ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಸಂಚಾರ ವ್ಯವಸ್ಥೆ ಸುಧಾರಿಸಲು ಮತ್ತೆ ಹೊಸ ಸಂಚಾರ ಠಾಣೆಗಳನ್ನು ತೆರೆಯಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.

ಪಶ್ಚಿಮ ವಿಭಾಗ(ಸಂಚಾರ) ಪೊಲೀಸ್ ವತಿಯಿಂದ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

‘ಜ್ಞಾನಭಾರತಿ ಮತ್ತು ಚಿಕ್ಕಬಾಣಾವರದಲ್ಲಿ ಹೊಸದಾಗಿ ಸಂಚಾರ ಪೊಲೀಸ್ ಠಾಣೆಗಳನ್ನು ಆರಂಭಿಸಲಾಗಿದೆ. ಇದೇ ವರ್ಷದಲ್ಲಿ ಶೇಷಾದ್ರಿಪುರ, ಜ್ಯೋತಿನಗರ ಮತ್ತು ಸಂಜಯನಗರದಲ್ಲೂ ಹೊಸ ಸಂಚಾರ ಠಾಣೆ ಸ್ಥಾಪಿಸಲಾಗುವುದು. ಹೊಸ ಸಂಚಾರ ಠಾಣೆಗಳು ಆರಂಭವಾದರೆ ಅವುಗಳ ಸಂಖ್ಯೆ 53ಕ್ಕೆ ಏರಿಕೆ ಆಗಲಿದೆ. 143 ಪೊಲೀಸ್ ಚೌಕಿಗಳನ್ನು ನಿರ್ಮಿಸಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೊಸದಾಗಿ 5 ಸಿಗ್ನಲ್ಗಳನ್ನು ನಿರ್ಮಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾತನಾಡಿ, ‘ನಗರದಲ್ಲಿ ಅತಿಹೆಚ್ಚು ಖಾಸಗಿ ವಾಹನಗಳಿದ್ದು, ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಶೇ 75ರಷ್ಟು ಅಪಘಾತಗಳು ದ್ವಿಚಕ್ರ ವಾಹನಗಳಿಂದಲೇ ಆಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಇದಕ್ಕೆ ಮುಖ್ಯ ಕಾರಣ ಸಂಚಾರ ನಿಯಮಗಳ ಉಲ್ಲಂಘನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.