ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ನಗರ ಸಂಚಾರ ವಿಭಾಗದ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು, ಮಂಗಳವಾರ ಒಂದೇ ದಿನ 1,055 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅವರಿಂದ ₹5.31 ಲಕ್ಷ ದಂಡ ಸಂಗ್ರಹಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ನಿಯಮ ಉಲ್ಲಂಘಿಸಿದವರ ವಿರುದ್ಧ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಕಾರ್ಯಾಚರಣೆ ನಡೆಸಲಾಯಿತು. ಏಕಮುಖ ಸಂಚಾರ ಹಾಗೂ ನಿರ್ಬಂಧಿತ ರಸ್ತೆಗಳಲ್ಲಿ ಸಂಚರಿಸಿದವರ ವಿರುದ್ಧ 812 ಪ್ರಕರಣ ದಾಖಲಿಸಿಕೊಂಡು ₹4.9 ಲಕ್ಷ ದಂಡ ಸಂಗ್ರಹಿಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡಿದ್ದವರ ವಿರುದ್ಧ 127 ಪ್ರಕರಣ ದಾಖಲಿಸಿಕೊಂಡು ₹64 ಸಾವಿರ ದಂಡ ಸಂಗ್ರಹಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಸಂಚಾರ ಮಾಡಿದ್ದವರ ವಿರುದ್ಧ 116 ಪ್ರಕರಣ ದಾಖಲಿಸಿಕೊಂಡು ₹58 ಸಾವಿರ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.