ಬೆಂಗಳೂರು: ವೇಶ್ಯಾವಾಟಿಕೆಗೆ ದೂಡಲು ಬಾಲಕಿಯರನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ, 12 ಬಾಲಕಿಯರನ್ನು ರಕ್ಷಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ 26 ಮಧ್ಯವರ್ತಿಗಳು ಹಾಗೂ 5 ಮಂದಿ ಗ್ರಾಹಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಾನವ ಕಳ್ಳ ಸಾಗಣೆ ನಿಯಂತ್ರಣ ಬಗ್ಗೆ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ವೇಶ್ಯಾವಾಟಿಕೆಗಾಗಿ ಬಾಲಕಿಯರನ್ನು ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಸರ್ಕಾರೇತರ ಸಂಸ್ಥೆ(ಎನ್ಜಿಒ) ನೀಡಿದ ಮಾಹಿತಿ ಆಧರಿಸಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 14ರಿಂದ 17 ವರ್ಷದ 12 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಪ್ರಕರಣದ ಸಂಬಂಧ ಬಂಧಿಸಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದಾಳಿ ವೇಳೆ ರಕ್ಷಣೆ ಮಾಡಲಾದ ಬಾಲಕಿಯರಿಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪುನರ್ವಸತಿ ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.

‘ದಾಳಿ ವೇಳೆ ಬಾಂಗ್ಲಾದೇಶದ ಮೂವರು ಬಾಲಕಿಯರು ಪತ್ತೆ ಆಗಿದ್ದರು. ಅವರನ್ನು ಆ ದೇಶಕ್ಕೆ ವಾಪಸ್ ಕಳುಹಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.