ಬೆಂಗಳೂರು: ‘ಆರನೇ ವೇತನ ಆಯೋಗದ ಅನ್ವಯ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು’ ಎಂದು ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾ ನಗರ ಸಾರಿಗೆ ನಿಗಮ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲಿದ್ದೇವೆ’ ಎಂದು ನೌಕರರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.