ಬೆಂಗಳೂರು: ‘ಕನ್ನಡಿಗರಿಗೆ ಸಿಗಬೇಕಾದ ಮಾನ್ಯತೆ, ಹಕ್ಕುಗಳು ಸಿಗುತ್ತಿಲ್ಲ. ಅಂಚೆ ಕಚೇರಿ, ರೈಲ್ವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವ ಪ್ರಮಾಣ ಕಡಿಮೆ‘ ಎಂದು ಕೆಎಸ್ಆರ್ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಮನು ಬಳಿಗಾರ್ ಬೇಸರ ವ್ಯಕ್ತಪಡಿಸಿದರು.

ಬಿಎಂಟಿಸಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಸೋಮವಾರ ನಡೆದ 16 ಮಂದಿ ಕನ್ನಡ ಪರಿಚಾರಕರಿಗೆ ‘ಸಾರಿಗೆ ಕನ್ನಡ ರತ್ನ ಪ್ರಶಸ್ತಿ‘ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡ, ನೆಲ, ಭಾಷೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಸತತವಾಗಿ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಕೆಎಸ್ಆರ್ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಗೌರವ ಸಲಹೆಗಾರ ವ.ಚ. ಚನ್ನೇಗೌಡ ಮಾತನಾಡಿ, ‘1.26 ಲಕ್ಷ ಸಾರಿಗೆ ಉದ್ಯೋಗಿಗಳಿದ್ದಾರೆ. ಬಹುತೇಕ ಎಲ್ಲರೂ ಕನ್ನಡಿಗರು ಎಂಬುದು ಸಂತೋಷದ ವಿಚಾರ. ಸಾರಿಗೆ ಸಂಸ್ಥೆಯಲ್ಲಿ ಆಡಳಿತ ಭಾಷೆ ಕನ್ನಡವೇ ಆಗಿದೆ’ ಎಂದು ಶ್ಲಾಘಿಸಿದರು.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಪ್ರಭುಸ್ವಾಮಿ, ರಾಜ್ಯ ಸಂಚಾಲಕ ಕೆ.ಎಸ್.ಹುಸೇನ್, ರಾಜ್ಯ ಜಂಟಿ ಕಾರ್ಯದರ್ಶಿ ಎಚ್.ಕೆ. ಸುರೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.