ಬೆಂಗಳೂರು: ಜೂನ್ ತಿಂಗಳಲ್ಲಿ ಟಿಕೆಟ್ ಇಲ್ಲದೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸಿದ 3,610 ಪ್ರಯಾಣಿಕರಿಗೆ, ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸಿದ 3,750 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.

ಕೆಎಸ್ಆರ್ಟಿಸಿಯ 43,126 ಬಸ್ಗಳನ್ನು ನಿಗಮದ ತನಿಖಾ ತಂಡದ ಅಧಿಕಾರಿಗಳು ತಪಾಸಣೆ ಮಾಡಿದ್ದರು. 3,610 ಪ್ರಯಾಣಿಕರು ಟಿಕೆಟ್ರಹಿತವಾಗಿ ಪ್ರಯಾಣಿಸುತ್ತಿರುವುದು ಪತ್ತೆಯಾಗಿತ್ತು. ಅವರಿಗೆ ₹5.97 ಲಕ್ಷ ದಂಡ ವಿಧಿಸಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹82,946 ಉಳಿತಾಯವಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಟಿಸಿಯ 18,378 ಟ್ರಿಪ್ಗಳನ್ನು ನಿಗಮದ ತನಿಖಾ ತಂಡಗಳ ಅಧಿಕಾರಿಗಳು ತಪಾಸಣೆ ನಡೆಸಿದ್ದರು. 3,750 ಪ್ರಯಾಣಿಕರಲ್ಲಿ ಟಿಕೆಟ್ ಇಲ್ಲದಿರುವುದು ಪತ್ತೆಯಾಗಿತ್ತು. ₹7.68 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಬಿಎಂಟಿಸಿಯ 1,014 ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 426 ಪುರುಷರಿಗೆ ₹ 42,600 ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.