ಬೆಂಗಳೂರು: ಕೊತ್ತನೂರಿನಲ್ಲಿ ಒತ್ತುವರಿಯನ್ನು ತೆರವುಗೊಳಿಸಿ ವಶಕ್ಕೆ ಪಡೆದಿರುವ 17 ಎಕರೆ ಜಮೀನಿನಲ್ಲಿ ವೃಕ್ಷೋದ್ಯಾನ, ಪಕ್ಷಿಲೋಕ ನಿರ್ಮಿಸುವ ಕಾಮಗಾರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಚಾಲನೆ ನೀಡಿದರು.

ಅರಣ್ಯ ಇಲಾಖೆ ಮರುವಶಪಡಿಸಿಕೊಂಡಿರುವ ಸುಮಾರು ₹500 ಕೋಟಿ ಮೌಲ್ಯದ 17 ಎಕರೆ ಜಮೀನನ್ನು ಪರಿಶೀಲಿಸಿದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋದ್ಯಾನ ನಿರ್ಮಾಣಕ್ಕೆ ಚಾಲನೆ ನೀಡಿದರು. 1,800 ಸ್ಥಳೀಯ ಪ್ರಭೇದದ ಸಸಿ ನೆಡುವುದು ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಯೂ ಆರಂಭವಾಯಿತು.

‘ಬೆಂಗಳೂರು ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ ಇರಬೇಕು. ಐಟಿ–ಬಿಟಿ ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋದ್ಯಾನ ಬೆಳಗಿನ ವಾಯುವಿಹಾರ, ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿಪಡಿಸಲಾಗುವುದು’ ಎಂದು ಈಶ್ವರ ಖಂಡ್ರೆ ತಿಳಿಸಿದರು.

‘ಪಕ್ಷಿಲೋಕವನ್ನೂ ಇಲ್ಲಿ ನಿರ್ಮಿಸಲಾಗುವುದು. ಬೃಹತ್ ಪಂಜರದೊಳಗೆ ಮರಗಳನ್ನು ಬೆಳೆಸಿ ಅದರಲ್ಲಿ ವಿವಿಧ ಬಗೆಯ ಪಕ್ಷಿಗಳನ್ನು ಬಿಡಲಾಗುವುದು. ಈ ಹಕ್ಕಿಗಳ ಕಲರವ, ಸ್ವಚ್ಛಂದ ಹಾರಾಟವನ್ನು ಸ್ಥಳೀಯರಷ್ಟೇ ಅಲ್ಲ, ಪ್ರವಾಸಿಗರೂ ಕಣ್ತುಂಬಿಕೊಳ್ಳುವಂತೆ ಮಾಡಲಾಗುವುದು’ ಎಂದರು.

ಹಿನ್ನೆಲೆ: ಕೆ.ಆರ್.ಪುರ ಹೋಬಳಿಯ ಕೊತ್ತನೂರು ಸರ್ವೆ ನಂಬರ್ 47ರಲ್ಲಿ 17 ಎಕರೆ 34 ಗುಂಟೆ ಜಮೀನನ್ನು ಜಿಲ್ಲಾಧಿಕಾರಿಯವರು 2006ರ ಜೂನ್ನಲ್ಲಿ ಅರಣ್ಯ ಎಂದು ಘೋಷಿಸಿದ್ದರು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಈ ಆದೇಶವನ್ನು ಪ್ರಶ್ನಿಸಲಾಗಿತ್ತು. ನ್ಯಾಯಾಲಯ ಜಿಲ್ಲಾಧಿಕಾರಿಯವರ ಆದೇಶವನ್ನು ಎತ್ತಿ ಹಿಡಿದಿತ್ತು.

ಇದಾದ 17 ವರ್ಷಗಳ ನಂತರ, 2023ರ ಜನವರಿಯಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ಈ ಅರಣ್ಯ ಭೂಮಿಯನ್ನು ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿದ್ದರು. ಅರಣ್ಯ ಜಮೀನು ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು.

ಈ ಪ್ರಕರಣ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಗಮನಕ್ಕೆ ಬಂದಾಗ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಸೆಕ್ಷನ್ 3ಬಿ ಮತ್ತು ಬಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಂತರ, ಹೈಕೋರ್ಟ್ನಲ್ಲಿ ಕೂಡ ಈ ಜಮೀನು ಅರಣ್ಯ ಇಲಾಖೆಗೆ ಸೇರಿದ್ದೆಂದು ತೀರ್ಪುಬಂದಿತು. ಮತ್ತೆ, ‘ಅರಣ್ಯ’ ಎಂದು ಜಿಲ್ಲಾಧಿಕಾರಿಗಳು ಇಂಡೀಕರಣ ಮಾಡಲು ಸೂಚಿಸಲಾಗಿತ್ತು. ಇದೀಗ ಈ ಅರಣ್ಯ ಜಮೀನಿನಲ್ಲೇ ವೃಕ್ಷೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲಾಗುತ್ತಿದೆ ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.

ಪಕ್ಷಿಲೋಕವನ್ನು ನಿರ್ಮಿಸಿ, ಹಕ್ಕಿಗಳ ಕಲರವ, ಸ್ವಚ್ಛಂದ ಹಾರಾಟವನ್ನು ಸ್ಥಳೀಯರಷ್ಟೇ ಅಲ್ಲ, ಪ್ರವಾಸಿಗರೂ ಕಣ್ತುಂಬಿಕೊಳ್ಳುವಂತೆ ಮಾಡಲಾಗುವುದು
ಈಶ್ವರ ಬಿ. ಖಂಡ್ರೆಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.