ಬೆಂಗಳೂರು: ನಗರದ ತುರಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಆ ನಿರ್ಧಾರದಿಂದ ಹಿಂದೆ ಸರಿದಿದ್ದ ಅರಣ್ಯ ಇಲಾಖೆಯು ಇದೇ ಅರಣ್ಯಪ್ರದೇಶದ ಮತ್ತೊಂದು ಭಾಗದಲ್ಲಿರುವ ವೃಕ್ಷೋದ್ಯಾನವನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ.

ತುರಹಳ್ಳಿ ಅರಣ್ಯದ ಶೋಭಾ ಫಾರೆಸ್ಟ್ ವ್ಯೂ ಅಪಾರ್ಟ್ಮೆಂಟ್ ಇರುವ ಭಾಗದಲ್ಲಿ ಈಗ ಅಸ್ತಿತ್ವದಲ್ಲಿರುವ ಟ್ರೀ ಪಾರ್ಕ್ನಲ್ಲಿ ಚಿಲ್ಡ್ರನ್ ಪಾರ್ಕ್, ಬಯಲು ವ್ಯಾಯಾಮ ಶಾಲೆ ಹಾಗೂ ಕುಡಿಯುವ ನೀರಿನ ಘಟಕ ನಿರ್ಮಾಣ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಪ್ರಾರಂಭಿಸಿದ್ದಾರೆ. ನಾಲ್ಕೈದು ದಿನಗಳಿಂದ ಈ ಕೆಲಸ ನಡೆಯುತ್ತಿದೆ.

‘ಈ ವೃಕ್ಷೋದ್ಯಾನವನ್ನು ಸಕಲ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮೂರು–ನಾಲ್ಕು ತಿಂಗಳಲ್ಲಿ ಈ ಎಲ್ಲ ಸೌಲಭ್ಯ ಕಲ್ಪಿಸುವ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಅರಣ್ಯದ 38 ಎಕರೆ ಪ್ರದೇಶದಲ್ಲಿ ಈಗಾಗಲೇ ಇಲ್ಲಿ ಟ್ರೀ ಪಾರ್ಕ್ ನಿರ್ಮಾಣವಾಗಿದೆ. 2011ರಲ್ಲಿ ಪ್ರಾರಂಭವಾದ ಕಾಮಗಾರಿ 2018ರಲ್ಲಿ ಪೂರ್ಣಗೊಂಡಿತ್ತು. ಆದರೆ, ಸಮರ್ಪಕವಾಗಿ ನಿರ್ವಹಿಸದ ಕಾರಣ ಹಾಳು ಬಿದ್ದಂತಾಗಿತ್ತು. ಈ ನಡುವೆಯೇ, ಅರಣ್ಯ ಪ್ರದೇಶದ ಇನ್ನೊಂದು ಭಾಗದಲ್ಲಿ ಮತ್ತೊಂದು ಟ್ರೀ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾದಾಗ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದರು.

‘ಈಗಾಗಲೇ ಇರುವ ವೃಕ್ಷೋದ್ಯಾನವನ್ನು ಅರಣ್ಯ ಇಲಾಖೆ ಅಭಿವೃದ್ಧಿ ಪಡಿಸಬೇಕು. ಸಾರ್ವಜನಿಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಎಲ್ಲ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶದ ರಕ್ಷಣೆಗೆ ಸುತ್ತ ತಂತಿ ಬೇಲಿ ನಿರ್ಮಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದರು.

‘ತುರಹಳ್ಳಿ ಕಾಡು ಕೆಡಿಸಲು ತರಾತುರಿ’ ಶೀರ್ಷಿಕೆಯಡಿ ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.