ಕೆಂಗೇರಿ: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಶ್ರೀನಿವಾಸ್ (15) ಮತ್ತು ಮಹಾಲಕ್ಷ್ಮಿ (13) ಮೃತರು ಎಂದು ಗುರುತಿಸಲಾಗಿದೆ.

ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿರುವ ಮೃತ ಮಕ್ಕಳ ತಾಯಿ, ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದರು.

ಕೆಲಸದ ನಿಮಿತ್ತ ತಾಯಿ ಹೊರ ಹೋಗಿದ್ದರು. ಸಂಜೆ 5:30ರ ವೇಳೆಗೆ ಬಟ್ಟೆ ಒಗೆಯಲು ಬಂದಿದ್ದ ಅಣ್ಣ, ತಂಗಿ ಕಾಲು ಜಾರಿ ಕೆರೆಗೆ ಬಿದ್ದಿರುವ ಶಂಕೆಯಿದ್ದು, ಬಟ್ಟೆ ಹಾಗೂ ಪಾತ್ರೆ ಕೆರೆಯ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಗೇರಿ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೆ ರಾತ್ರಿಯವರೆಗೂ ಶವ ಪತ್ತೆಯಾಗಲಿಲ್ಲ. ಮಳೆ ಕಾರಣ ಮುಂಜಾನೆಯಿಂದ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಕೆಂಗೇರಿ ಸಿಪಿಐ ಸಂಜೀವ್ ಗೌಡ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.