ರಾಜರಾಜೇಶ್ವರಿನಗರ: ಎರಡು ದಿನದ ಹಿಂದೆ ಸುರಿದ ಜೋರು ಮಳೆಗೆ ಬಂಗಾರಪ್ಪ ನಗರದಲ್ಲಿ ಎರಡು ಮನೆಗಳು ಕುಸಿದು ಬಿದ್ದಿದ್ದು, ಸ್ಥಳಕ್ಕೆ ಬಿಬಿಎಂಪಿ ಉಪ ಆಯುಕ್ತ ಅಬ್ದುಲ್ ರಬ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆಗಳನ್ನು ಕಳೆದುಕೊಂಡ ಶಿವಮ್ಮ ಮತ್ತು ಪದ್ಮ ಅವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

ನಂತರ ಮಾತನಾಡಿ, ಮಳೆಯಿಂದ ಹಾನಿಯಾಗಿರುವ ಕುಟುಂಬಗಳಿಗೆ ಬಿಬಿಎಂಪಿಯಿಂದ ಪರಿಹಾರ ಹಾಗೂ ಹೊಸದಾಗಿ ಮನೆಗಳನ್ನು ಮಂಜೂರು ಮಾಡಿಸಿ ಕೊಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಶಿವನಂಜ ಕುಮಾರ್ ಮಾತನಾಡಿ, ‘ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕಾನೂನು ಪ್ರಕಾರ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ದೊರಕಿಸಿಕೊಡಲಾಗುವುದು’ ಎಂದರು.

ಸಹಾಯಕ ಕಂದಾಯ ಅಧಿಕಾರಿ ಸುರೇಶ್, ಕಂದಾಯ ಅಧಿಕಾರಿ ಗಣೇಶ್. ಸಹಾಯಕ ಎಂಜಿನಿಯರ್ ಅಮಿತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.