ಬೆಂಗಳೂರು: ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ವಿದ್ಯುತ್ ತಗುಲಿ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ.

ರಾಯಚೂರಿನ ಕರಿಯಪ್ಪ (22) ಹಾಗೂ ನಾಗರಾಜು (19) ಮೃತರು.

‘ಒಂದು ವರ್ಷದಿಂದ ಒಜಾಸ್ ಕಂಪನಿಯವರು ಬಿಬಿಎಂಪಿ ವತಿಯಿಂದ ರಾಜಕಾಲುವೆ ಸ್ವಚ್ಚಗೊಳಿಸುವ ಕಾಮಗಾರಿಯಲ್ಲಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಮಂಗಳವಾರ ಟಿ.ದಾಸರಹಳ್ಳಿ ಬಳಿ ಮಲ್ಲಸಂದ್ರ ರಾಜಕಾಲುವೆ ಕೆಲಸ ಮುಗಿಸಿಕೊಂಡು ತಾವು ವಾಸವಿದ್ದ ಎಚ್ ಎಸ್ ಆರ್ ಲೇಔಟ್‌ಗೆ ಹೋಗುವಾಗ ನಾಲ ರಸ್ತೆ ಬಳಿ ಕೆಲಸ ಮಾಡುತ್ತಿದ್ದ ತಮ್ಮ ಸಂಗಡಿಗರುನ್ನು ಕರೆದುಕೊಂಡು ಹೋಗಲು ಬಂದಿದ್ದರು ಆ ವೇಳೆಯಲ್ಲಿ ನಾಲಾರಸ್ತೆಯ ರಾಜ ಕಾಲುವೆ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದು ಅಲ್ಲಿ ಕಾಲುವೆಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರೂ ಮೃತಪಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.