ಬೆಂಗಳೂರು: ವಿಧಾನಮಂಡಲದ ಉಭಯ ಸಚಿವಾಲಯದ ಅಧೀನದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಏಕರೂಪದ ಬಾಡಿಗೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ನಡೆಸಿದ ಜಂಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಶಾಸಕರ ಭವನದ ವಾಣಿಜ್ಯ ಮಳಿಗೆಗಳ ಮಾಸಿಕ ಬಾಡಿಗೆಯಲ್ಲಿ ತಾರತಮ್ಯವಿದ್ದು, ಇದನ್ನು ಸರಿಪಡಿಸಿ, ಅಂಗಡಿಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಏಕರೂಪ ಬಾಡಿಗೆ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂಬಂಧ ಶೀಘ್ರವೇ ಪ್ರಸ್ತಾವನೆ ಸಲ್ಲಿಸುವಂತೆಯೂ ನಿರ್ದೇಶನ ನೀಡಲಾಯಿತು ಎಂದು ವಿಧಾನಸಭೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಶಾಸಕರ ಭವನದಲ್ಲಿ ಹಳೆಯ ಮಳಿಗೆಗಳನ್ನು ತೆರವುಗೊಳಿಸಿ ಅಲ್ಲಿ ಹೊಸ ಮಳಿಗೆಗಳನ್ನು ನಿರ್ಮಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಹೊರಟ್ಟಿ ಮತ್ತು ಕಾಗೇರಿ ಶಾಸಕರ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರ ಭವನದ ಸುಗಮ ಸಂಚಾರಕ್ಕೆ ಅಡ್ಡಿ ಮಾಡುವ ಅಂಗಡಿಗಳನ್ನು ತೆರವುಗೊಳಿಸಲು ಸೂಚಿಸಲಾಯಿತು ಎಂದೂ ಪ್ರಕಟಣೆ ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.