ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದ ಐವರು ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಈ ಬಾರಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಬಿ.ಕೃತಿ, ಸ್ಪರ್ಶಾ ನೀಲಂಗಿ, ಎಚ್.ಬಿ.ವಿವೇಕ್, ಸವಿತಾ ಗೋಟಿಯಲ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಎಚ್.ಎನ್.ಮಿಥುನ್ ಅವರು ಯುಪಿಎಸ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್.ದೊರೆಸ್ವಾಮಿ,'ಸಂಸ್ಥೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಇದುವರೆಗೆ ತೇರ್ಗಡೆಯಾಗಿದ್ದಾರೆ. ಈ ಬಾರಿ ಸಾಧನೆ ಮಾಡಿರುವ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಅವರ ವೃತ್ತಿ ಜೀವನದಲ್ಲಿ ಯಶಸ್ಸು ಸಿಗಲಿ. ರಾಷ್ಟ್ರೀಯ ಹಿತಾಸಕ್ತಿ ಹಾಗೂ ಮೌಲ್ಯಗಳನ್ನು ಅವರು ವೃತ್ತಿಜೀವನದಲ್ಲಿ ಕಾಪಾಡಲಿ' ಎಂದು ಶುಭ ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.