ಬೆಂಗಳೂರು: ‘ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರನ್ನು ಬಂಧಿಸಿ ತನಿಖೆಗೊಳಪಡಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು
ಆಗ್ರಹಿಸಿದರು.

ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದುವೇಳೆ ಯಾವುದಾದರೂ ಮರಣಪತ್ರದಲ್ಲಿ ಜನಸಾಮಾನ್ಯರ ಹೆಸರಿದ್ದರೆ, ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಆದರೆ ಬಿಜೆಪಿಯ ಸಚಿವರು ಅಥವಾ ಶಾಸಕರ ಹೆಸರಿದ್ದರೆ ಖುಲಾಸೆ ಮಾಡುತ್ತಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆಯೇ? ಅರವಿಂದ ಲಿಂಬಾವಳಿ ಅವರಿಗೆ ಸಾಕ್ಷ್ಯ ನಾಶಕ್ಕೆ ಅವಕಾಶ ನೀಡದೇ, ಶೀಘ್ರವೇ ಬಂಧಿಸಬೇಕು. ಪ್ರದೀಪ್ ಸಾವಿನಲ್ಲಿ ಅರವಿಂದ ಲಿಂಬಾವಳಿ ಪಾತ್ರ ಏನೆಂಬುದು ಎಲ್ಲರಿಗೂ ತಿಳಿಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಪ್ರದೀಪ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.

ಪೊಲೀಸರು ಅರವಿಂದ ಲಿಂಬಾವಳಿ ಅವರನ್ನು ಬಂಧಿಸಿ ವಿಚಾರಣೆ ನಡೆಸದಿದ್ದರೆ ಪ್ರದೀಪ್ ಆತ್ಮಹತ್ಯೆ ಪ್ರಕರಣ ಕೂಡ ಅದೇ ರೀತಿ ಮುಚ್ಚಿಹೋಗುವ ಅಪಾಯವಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.