ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಗ್ಗೆ ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವಹೇಳನಕಾರಿ ಶಬ್ದ ಬಳಕೆ ಮಾಡಿರುವುದನ್ನು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಖಂಡಿಸಿದ್ದಾರೆ.

ಚುನಾಯಿತ ಪ್ರತಿನಿಧಿಯೊಬ್ಬರು ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ಅದಕ್ಕೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಇರುತ್ತಾರೆ. ಕಾರ್ಯಾಂಗದ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳ ವಿರುದ್ಧ ಪ್ರತಿಕ್ರಿಯಿಸುವ ಅಧಿಕಾರವನ್ನು ಈ ಐಪಿಎಸ್ ಅಧಿಕಾರಿಗೆ ಯಾರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

‘ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹಾಲಿ ಕೇಂದ್ರ ಸಚಿವರ ಬಗ್ಗೆ ಲಘುವಾಗಿ ಪ್ರತಿಕ್ರಿಯಿಸಿರುವ ಅಧಿಕಾರಿ ಮೇಲೆ ಸರ್ಕಾರ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.