ಬೆಂಗಳೂರು: ಬೆಂಗಳೂರು ಕೇಂದ್ರ(ಸೆಂಟ್ರಲ್) ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಮತ್ತು ಮೆಯೊಹಾಲ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸಬೇಕು’ ಎಂದು
ಕೋರಿ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಅರ್ಜಿದಾರರ ಪರ ವಕೀಲ ಎಸ್.ಎ.ಅಹಮದ್ ವಾದ ಮಂಡಿಸಿ,‘ರಿಜ್ವಾನ್ ಧಾರ್ಮಿಕ ಆಧಾರದಲ್ಲಿ ಮತಯಾಚನೆ ಮಾಡಿಲ್ಲ. ಈ ಸಂಬಂಧಅರ್ಜಿದಾರರ ವಿರುದ್ಧ ಹೊರಿಸಲಾಗಿರುವ ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 171, 171ಐ ಮತ್ತು ಜನತಾ ಪ್ರತಿನಿಧಿ ಕಾಯ್ದೆ–1951ರ ಕಲಂ 133ರ ಅನ್ವಯ ದಾಖಲಾಗಿರುವ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿಯೂ ಮೇಲ್ನೋಟಕ್ಕೆ ಯಾವುದೇ ಸಾಕ್ಷ್ಯ ಕಂಡುಬರುವುದಿಲ್ಲ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದರು. ಇದನ್ನು ಮಾನ್ಯ ಮಾಡಿರುವ ನ್ಯಾಯಪೀಠ, ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

ಪ್ರಕರಣವೇನು?

‘ದೊಡ್ಡನೆಕ್ಕುಂದಿ ಗ್ರಾಮದ ಕೋದಂಡರಾಮ ಸರ್ಕಲ್ ದೇವಾಲಯದಲ್ಲಿ 2019ರ ಏಪ್ರಿಲ್ 13ರಂದು ನಡೆಯುತ್ತಿದ್ದ ಶ್ರೀರಾಮನವಮಿ ಉತ್ಸವದ ವೇಳೆ ಅನುಮತಿ ಪಡೆಯದೆ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಷೋ ನಡೆಸಿ ಮತಯಾಚನೆ ಮಾಡಿದ್ದಾರೆ‘ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.