ಬೆಂಗಳೂರು: ನಟ ವಿಷ್ಣುವರ್ಧನ್ ಅವರ 73ನೇ ವರ್ಷದ ಜನ್ಮದಿನವನ್ನು ಇದೇ 18ರಂದು ಅಭಿಮಾನ್ ಸ್ಟುಡಿಯೊದಲ್ಲಿ ಆಚರಿಸಲಾಗುವುದು ಎಂದು ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ತಿಳಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ರಾಜುಗೌಡ, ‘ಈ ಬಾರಿ ವಿಷ್ಣುವರ್ಧನ್ ಅವರ ಜನ್ಮದಿನವನ್ನು ಸರಳವಾಗಿ ಆಚರಿಸಲಾಗುವುದು. ಅಭಿಮಾನ್ ಸ್ಟುಡಿಯೊದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಅನ್ನದಾನ, ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿದೆ’ ಎಂದು ತಿಳಿಸಿದರು.

‘ಅಭಿಮಾನ್ ಸ್ಟುಡಿಯೊದಲ್ಲಿರುವ ವಿಷ್ಣುವರ್ಧನ್ ಸಮಾಧಿಯ ಭೂಮಿಗೆ ಸಂಬಂಧಿಸಿದ ಪ್ರಕರಣವನ್ನು 2023ರ ಆ. 21ರಂದು ಹೈಕೋರ್ಟ್ ವಜಾಗೊಳಿಸಿದೆ. ಆದ್ದರಿಂದ, ಸರ್ಕಾರ ಕೂಡಲೇ ಅಭಿಮಾನ್ ಸ್ಟುಡಿಯೊದ ಮಾಲೀಕರೊಂದಿಗೆ ಸಭೆ ನಡೆಸಿ ವಿಷ್ಣು ವರ್ಧನ್ ಅವರ ಸಮಾಧಿಯ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.