ಬೆಂಗಳೂರು: ‘ನೀರು ಪೂರೈಕೆಯಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಹಿರಿಯ ಅಧಿಕಾರಿಗಳು ಖುದ್ಧಾಗಿ ಸ್ಥಳಕ್ಕೆ ಭೇಟಿ ನೀಡಬೇಕು’ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದರು.

ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಜೂನ್ ಮೊದಲ ವಾರದಲ್ಲಿ ಕಾವೇರಿ ಐದನೇ ಹಂತದ ಯೋಜನೆಯ ಪರಿಶೀಲನೆಗಾಗಿ ನಗರದಾದ್ಯಂತ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿತ್ತು. ಸಮಸ್ಯೆ ಇರುವ ಸ್ಥಳಗಳಲ್ಲಿ ಪರಿಹಾರ ಕ್ರಮ ಕೈಗೊಂಡು ನೀರು ಪೂರೈಕೆ ಪುನರಾರಂಭ ಆದ ಬಳಿಕವೂ ನಗರದ ಕೆಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಜೊತೆಗೆ, ಮಳೆ ನೀರಿನಿಂದಾಗಿ ಒಳ ಚರಂಡಿಗಳು ಉಕ್ಕಿ ಹರಿಯುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಸಮಸ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಬೇಸಿಗೆಯಲ್ಲಿ ಯಶಸ್ವಿಯಾಗಿ ನೀರು ನಿರ್ವಹಣೆ ಮಾಡಿದಂತೆ, ಮಳೆಗಾಲದಲ್ಲೂ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯತತ್ಪರರಾಗಬೇಕು’ ಎಂದು ಸೂಚಿಸಿದರು.

‘ಆಯಾ ವಲಯದ ಮುಖ್ಯ ಎಂಜಿನಿಯರ್ಗಳು ತಮ್ಮ ಅಧೀನ ಅಧಿಕಾರಿಗಳ ತಂಡ ರಚಿಸಿಕೊಂಡು ಕೆಲಸ ಮಾಡಬೇಕು. ನಗರದಲ್ಲಿ ಜಲಮಂಡಳಿಯ 143 ಸೇವಾ ಕೇಂದ್ರಗಳಿವೆ. ಈ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ದೂರುಗಳನ್ನು ಖುದ್ದಾಗಿ ಹಿರಿಯ ಅಧಿಕಾರಿಗಳು ಪರಿಶೀಲಿಸಿ ಪರಿಹರಿಸಬೇಕು’ ಎಂದು ತಿಳಿಸಿದರು.

ಮುಂದಿನ ವಾರದಿಂದ ಸೇವಾ ಕೇಂದ್ರಗಳ ವ್ಯಾಪ್ತಿಯಲ್ಲಿ ಪರಿಶೀಲನೆ ಆರಂಭಿಸಲಾಗುವುದು. ಹೆಚ್ಚಿನ ದೂರುಗಳು ಬಂದ ಪ್ರದೇಶಗಳಿಂದಲೇ ಪರಿಶೀಲನೆ ಆರಂಭವಾಗಲಿದೆ ಎಂದು ರಾಮ್ಪ್ರಸಾತ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.