ಹೆಸರಘಟ್ಟ: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ₹25 ಲಕ್ಷ ಅನುದಾನದಲ್ಲಿ ಸಾಸುವೆಘಟ್ಟ ಮತ್ತು ಹೆಸರಘಟ್ಟ ಗ್ರಾಮದಲ್ಲಿ ನಿರ್ಮಿಸುತ್ತಿರುವ ನೀರು ಶೇಖರಣಾ ತೊಟ್ಟಿಯ ಕಾಮಗಾರಿಗೆ ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ‘ಹೆಸರಘಟ್ಟ ಗ್ರಾಮದಲ್ಲಿ ನೀರಿನ ಬೇಡಿಕೆ ಹೆಚ್ಚುತ್ತಿದೆ. ಮಳೆಯು ಹೋದ ವರ್ಷ ಕೈ ಕೊಟ್ಟಿರುವುದರಿಂದ ನೀರಿನ ಆಭಾವ ಕಾಡುತ್ತಿದೆ. ಇರುವ ನೀರಿನ ಮೂಲವನ್ನು ಸಂಗ್ರಹಿಸಿ ಜನರಿಗೆ ತಲುಪಿಸಬೇಕಾಗಿದೆ’ ಎಂದು ಹೇಳಿದರು.

‘₹1 ಕೋಟಿ ವೆಚ್ಚದಲ್ಲಿ ಹೆಸರಘಟ್ಟ ಮುಖ್ಯರಸ್ತೆ ಅಭಿವೃದ್ಧಿಪಡಿಸಲಾಗುವುದು. ಪದವಿಪೂರ್ವ ಕಾಲೇಜಿನ ಕೊಠಡಿಗಳ ಕಾಮಗಾರಿ ಮುಗಿದಿದ್ದು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗಿದೆ’ ಎಂದು ಅವರು ತಿಳಿಸಿದರು.

ಹೆಸರಘಟ್ಟ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.