ಬೆಂಗಳೂರು: ‘ನಾವು ತರಳಬಾಳು ಪೀಠದ ಅಪ್ಪಟ ಭಕ್ತರು. ಆದರೆ ಅಲ್ಲಿನ ಕೆಲವು ಧೋರಣೆಗಳಿಗೆ ನಮ್ಮ ವಿರೋಧವಿದೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ‘ಶ್ರದ್ಧಾಂಜಲಿ ಸಮಿತಿ’ ಆಯೋಜಿಸಿದ್ದ ‘ತರಳಬಾಳು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾವು ಮಠದಿಂದ ಒಂದು ಪೈಸೆಯನ್ನೂ ಬಯಸುವುದಿಲ್ಲ. ಭಕ್ತರಲ್ಲಿ ವಿಷ ಬೀಜ ಬಿತ್ತುವವರನ್ನು ಸಂಪೂರ್ಣವಾಗಿ ಕೈಬಿಡಬೇಕು’ ಎಂದು ಒತ್ತಾಯಿಸಿದರು.

‘ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರು ಸ್ವಾತಂತ್ರ್ಯಪೂರ್ವದಲ್ಲಿ ಹಳ್ಳಿ–ಹಳ್ಳಿಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಿದ್ದರು. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ವಿದ್ಯಾವಂತರಾಗಬೇಕು ಎನ್ನುವುದು ಅವರ ಆಶಯವಾಗಿತ್ತು. ಆದರೆ ಇಂದು ಆ ಶಾಲೆಗಳು ಮುಚ್ಚಿ ಹೋಗುವ ಪರಿಸ್ಥಿತಿಯಲ್ಲಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಮಾತನಾಡಿ, ‘ಗುರುಗಳು, ಪೀಠಾಧ್ಯಕ್ಷರು ಸ್ಥಾವರಗಳಿಗೆ ಅಂಟಿಕೊಳ್ಳಬಾರದು ಎನ್ನುವುದಕ್ಕೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಉತ್ತಮ ಉದಾಹರಣೆಯಾಗಿದ್ದರು. ವೇದ ಉಪನಿಷತ್ತುಗಳಲ್ಲಿ ಉತ್ತಮ ವಿಚಾರಧಾರೆಗಳಿವೆ. ಆದರೆ ಅವುಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಲೋಪಗಳಾಗಿವೆ’ ಎಂದು ಹೇಳಿದರು.

ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಜಿ. ಸದಾನಂದಯ್ಯ, ಅಣಬೇರು ರಾಜಣ್ಣ, ಸಿದ್ಧಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.