ಬೆಂಗಳೂರು: ನಗರದ ವಿವಿಧೆಡೆ ವ್ಹೀಲಿ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.

ತಲಘಟ್ಟಪುರದ 80 ಅಡಿ ರಸ್ತೆಯಲ್ಲಿ ಇಬ್ಬರು ಯುವಕರು ವ್ಹೀಲಿ ಮಾಡುತ್ತಿದ್ದರು. ಸಾರ್ವಜನಿಕರ ದೂರಿನ ಮೇರೆಗೆ ಇಬ್ಬರನ್ನೂ ಪೊಲೀಸರು ಪತ್ತೆ ಹಚ್ಚಿ, ವಾಹನವನ್ನು ಜಪ್ತಿ ಮಾಡಿದರು.

'ಆರೋಪಿಗಳು ಮಾದಕ ವಸ್ತು ಸೇವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪರೀಕ್ಷೆಗೆ ಒಳಪಡಿಸಲಾಗಿತ್ತು. ವೈದ್ಯಕೀಯ ವರದಿಯಲ್ಲಿ ಇಬ್ಬರೂ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿತ್ತು, ಇಬ್ಬರ ವಿರುದ್ದವೂ ಪ್ರಕರಣ ದಾಖಲಿಸಲಾಗಿದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ಟರಹಳ್ಳಿ ಜಂಕ್ಷನ್ ಬಳಿ ವ್ಹೀಲಿ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿ, ವಾಹನ ವಶಕ್ಕೆ ಪಡೆದಿದ್ದಾರೆ.

ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಹೀಲಿ ಮಾಡುತ್ತಿದ್ದ ಬಾಲಕನನ್ನು ಪತ್ತೆ ಮಾಡಿ, ಆತನ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಪ್ರಾಪ್ತನಾಗಿರುವ ಕಾರಣ ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬನಶಂಕರಿ ಎರಡನೇ ಹಂತದ ಯಾರಬ್ ನಗರದ ಮುಖ್ಯ ರಸ್ತೆಯಲ್ಲಿ ವ್ಹೀಲಿ ಮಾಡುತ್ತಿದ್ದ ಸೈಯದ್ ಸಲ್ಮಾನ್ (24) ಎಂಬಾತನ ವಿರುದ್ಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.