ಬೆಂಗಳೂರು: ‘ಸಲಿಂಗಕಾಮಿಯಾದ ಪತಿಯನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿ, 29 ವರ್ಷದ ಮಹಿಳೆಯೊಬ್ಬರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್ಆರ್ಐ ದಾಖಲಾಗಿದೆ. ಶಿವಮೊಗ್ಗ ಮೂಲದ ಮಹಿಳೆ 2020ರಲ್ಲಿ ಮದುವೆಯಾಗಿದ್ದರು.

‘ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆಗೆ ಕರೆಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಲೈಂಗಿಕ ಜೀವನ ಉತ್ತಮವಾಗಿರಲಿಲ್ಲ. ಇದರಿಂದ ಮಕ್ಕಳು ಆಗಿರಲಿಲ್ಲ. ಸಂಬಂಧಿಕರು ಪ್ರಶ್ನಿಸಲು ಆರಂಭಿಸಿದ್ದರು. ಪತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸಂಬಂಧಿಕರು ಸೂಚಿಸಿದ್ದರು. ಇದರ ಬಗ್ಗೆ ತಿಳಿಸಿದ್ದಕ್ಕೆ ಪತಿ ನನ್ನನ್ನೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

‘ಪತಿಯ ಫೇಸ್ಬುಕ್ ಪರಿಶೀಲಿಸಿದೆ. ಅಲ್ಲಿ ಸಲಿಂಗಕಾಮಿ ಎಂಬುದು ತಿಳಿಯಿತು. ಇದಾದ ಮೇಲೆ ನನ್ನ ಮೇಲೆ ನಿರಂತರ ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.