ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್‌ಹೆಡ್ ಮತ್ತು ಸಹಿ ಬಳಸಿಕೊಂಡು, ಅವರ ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು ನೇಮಕಾತಿ ಆದೇಶ ಪಡೆದಿದ್ದಾರೆ.

ಈ ಸಂಬಂಧ ವಿಧಾನಸಭಾ ಸಚಿವಾಲಯದ ಅಧೀನ ಕಾರ್ಯದರ್ಶಿ ಲಲಿತಾ ಅವರು ನೀಡಿರುವ ದೂರು ಆಧರಿಸಿ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರು ನಿವಾಸಿ ಕೆ.ಸಿ. ವಿನುತಾ ಎಂಬುವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರಿನ ಕೆ.ಸಿ. ವಿನುತಾ ಅವರನ್ನು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸುವಂತೆ ಶಾಸಕರು ಮನವಿ ಮಾಡಿರುವಂತೆ ಶಾಸಕರ ಲೆಟರ್‌ಹೆಡ್‌ನಲ್ಲಿ ಪತ್ರ ತಯಾರಿಸಿ, ಸಹಿ ಮಾಡಿ ವಿಧಾನಸಭಾ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರೇ ನೀಡಿರುವ ಪತ್ರವೆಂದು ಭಾವಿಸಿದ್ದ ಸಚಿವಾಲಯದ ಅಧಿಕಾರಿಗಳು, ವಿನುತಾ ಅವರನ್ನು ಆಪ್ತ ಸಹಾಯಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು. ಬಳಿಕ ತಾವು ಪತ್ರ ನೀಡಿಲ್ಲ, ಅದು ನಕಲಿ ಎಂದು ಶಿವಶಂಕರಪ್ಪ ಅವರು ವಿಧಾನಸಭಾ ಸಚಿವಾಲಯದ ಗಮನಕ್ಕೆ ತಂದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ಶೀಘ್ರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.