ಬೆಂಗಳೂರು: ನಗರದಲ್ಲಿ ವಾರ್ಷಿಕ ಸರಾಸರಿ 6,380 ಪುರುಷರು ಹಾಗೂ 8,350 ಮಹಿಳೆಯರು ಕ್ಯಾನ್ಸರ್ ಪೀಡಿತರಾಗುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.

ವಿಶ್ವ ಕ್ಯಾನ್ಸರ್ ದಿನದ ಪ್ರಯುಕ ಸಂಸ್ಥೆ ನಗರದಲ್ಲಿ ಭಾನುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

‘ನಮ್ಮ ರಾಷ್ಟ್ರದಲ್ಲಿ ಕ್ಯಾನ್ಸರ್ ಒಂದು ಪ್ರಮುಖ ಸಮಸ್ಯೆಯಾಗಿದೆ. ದೇಶದಲ್ಲಿ ಪ್ರತಿ ವರ್ಷ 13.9 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ಹೊಸದಾಗಿ ಪತ್ತೆಯಾಗುತ್ತಿವೆ. ಕರ್ನಾಟಕದಲ್ಲಿ 87,400 ಸಕ್ರಿಯ ಪ್ರಕರಣಗಳಿವೆ. ಆರಂಭದಲ್ಲಿಯೇ ಈ ರೋಗವನ್ನು ಪತ್ತೆಮಾಡಿ, ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದಾಗಿದೆ. ಹೆಚ್ಚಿನ ರೋಗಿಗಳು ಉಲ್ಬಣಾವಸ್ಥೆ ತಲುಪಿದ ನಂತರವೇ ಕ್ಯಾನ್ಸರ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ವಿ. ಲೋಕೇಶ್ ತಿಳಿಸಿದ್ದಾರೆ.

‘ಪಾಶ್ಚಾತ್ಯ ಜೀವನಶೈಲಿ, ತಂಬಾಕು ಉತ್ಪನ್ನಗಳ ಸೇವನೆ ಸೇರಿ ವಿವಿಧ ಕಾರಣಗಳಿಂದ ರೋಗ ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ದೀರ್ಘಕಾಲ ವಾಸಿಯಾಗದ ಹುಣ್ಣು, ಅಸಮಾನ್ಯ ರಕ್ತಸ್ರಾವ ಸೇರಿ ಕ್ಯಾನ್ಸರ್ನ ವಿವಿಧ ಲಕ್ಷಣಗಳನ್ನು ಗುರುತಿಸಿ, ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.