ಬೆಂಗಳೂರು: ‘ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ತಲಾ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 21 ಮಂದಿನಗರದಲ್ಲಿ ತಂಬಾಕು ಸಂಬಂಧಿತ ಕ್ಯಾನ್ಸರ್ಗೆ ಒಳಪಡುತ್ತಿದ್ದಾರೆ. ಪ್ರತಿ ವರ್ಷ 3 ಸಾವಿರಕ್ಕೂ ಅಧಿಕ ಮಂದಿ ಈ ಮಾದರಿಯ ಕ್ಯಾನ್ಸರ್ ಚಿಕಿತ್ಸೆಗೆದಾಖಲಾಗುತ್ತಿದ್ದಾರೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.

ವಿಶ್ವ ತಂಬಾಕು ರಹಿತ ದಿನ ಆಚರಣೆ ಪ್ರಯುಕ್ತ ಸಂಸ್ಥೆ ಪ್ರಕಟಣೆ ಹೊರಡಿಸಿದೆ.‘ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ಇದು ದೇಹದ ವಿವಿಧ ಅಂಗಾಂಗಗಳ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ. ಬಹುತೇಕ ಕ್ಯಾನ್ಸರ್ ಪೀಡಿತರು ರೋಗ ಉಲ್ಬಣಗೊಂಡ ಬಳಿಕ ಚಿಕಿತ್ಸೆಗೆ ಬರುತ್ತಾರೆ. ಕ್ಯಾನ್ಸರ್ ಇರುವುದು ಪ್ರಾಥಮಿಕ ಹಂತದಲ್ಲಿಯೇ ಪತ್ತೆಯಾದರೆ ಅಗತ್ಯ ಚಿಕಿತ್ಸೆ ನೀಡಿ, ಗುಣಪಡಿಸಬಹುದು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ಹೇಳಿದ್ದಾರೆ.

‘ತಂಬಾಕು ಸೇವನೆಯಿಂದ ಬರುವ ಕ್ಯಾನ್ಸರ್ ನಿಯಂತ್ರಣಕ್ಕಾಗಿ ಕಾರ್ಯನೀತಿಗಳು ಹಾಗೂ ಕಾರ್ಯತಂತ್ರವನ್ನು ರೂಪಿಸಬೇಕು. ತೆರಿಗೆ ವಿಧಿಸುವುದು, ಜಾಹೀರಾತು ನಿಷೇಧ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡರೆ ಮಾತ್ರ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ತರಬಹುದು’ ಎಂದು ತಿಳಿಸಿದ್ದಾರೆ.

ಕ್ಯಾನ್ಸರ್ ಪತ್ತೆ ಶಿಬಿರ: ‘ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ಜೀವನ ವಿಧಾನ, ಧೂಮಪಾನದಂತಹ ವ್ಯಸನ, ಕೆಲಸದ ಒತ್ತಡ ಸೇರಿದಂತೆ ವಿವಿಧ ಕಾರಣಗಳಿಂದ ಎಲ್ಲ ಮಾದರಿಯ ಕ್ಯಾನ್ಸರ್ ಪ್ರಕರಣ ಹೆಚ್ಚಳವಾಗುತ್ತಿವೆ. ಸಮುದಾಯ ಗಂಥಿಶಾಸ್ತ್ರ ವಿಭಾಗದ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿ ತಿಂಗಳು 6ರಿಂದ 7 ಕ್ಯಾನ್ಸರ್ಪತ್ತೆ ಶಿಬಿರ ನಡೆಸಲಾಗುತ್ತಿದೆ’ ಎಂದುಡಾ.ಸಿ. ರಾಮಚಂದ್ರ ವಿವರಿಸಿದ್ದಾರೆ.

‘ಜನರು ತಪಾಸಣೆಗೆ ಒಳಪಡುವ ಮೂಲಕ ಕ್ಯಾನ್ಸರ್ ಪತ್ತೆ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ತಂತ್ರಜ್ಞಾನವು ಸಾಕಷ್ಟು ಮಂದುವರಿದಿದ್ದು, ಮ್ಯಾಮೋಗ್ರಾಮ್ನಿಂದ ಯಾವುದೇ ತೊಂದರೆ ಇಲ್ಲ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.