ಬೆಂಗಳೂರು: ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿರುವ ನೈಸ್ ರಸ್ತೆಯ ಬಳಿ ₹2,000 ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ.

‘ಕನಕಪುರ ರಸ್ತೆಗೆ ಹೊಂದಿಕೊಂಡಿರುವ ನೈಸ್ ರಸ್ತೆ ಬಳಿಯ ಪೊದೆಯಲ್ಲಿ ಸೂಟ್ಕೇಸ್ ಹಾಗೂ ಎರಡು ರಟ್ಟಿನ ಬಾಕ್ಸ್ಗಳು ಇದ್ದವು. ಅನುಮಾನಗೊಂಡ ಸ್ಥಳೀಯರು, ಎರಡನ್ನೂ ಬಿಚ್ಚಿ ನೋಡಿದ್ದರು. ಆಗ ಜೆರಾಕ್ಸ್ ನೋಟುಗಳು ಕಂಡಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಸ್ಥಳಕ್ಕೆ ಹೋಗಿ ನೋಟುಗಳನ್ನು ಜಪ್ತಿ ಮಾಡಲಾಗಿದೆ. ₹ 2,000 ಮುಖಬೆಲೆಯ ಜೆರಾಕ್ಸ್ ನೋಟುಗಳು ಇವಾಗಿವೆ. ಇವುಗಳ ಒಟ್ಟು ಮೊತ್ತ ₹10 ಕೋಟಿ. ಅಸಲಿ ನೋಟುಗಳನ್ನು ಹೋಲುವ ರೀತಿಯಲ್ಲಿ ಬಣ್ಣದ ಜೆರಾಕ್ಸ್ ಬಳಸಿ ನಕಲಿ ನೋಟುಗಳನ್ನು ಮುದ್ರಿಸಲಾಗಿದೆ. ಅಸಲಿ ನೋಟುಗಳ ಜೊತೆ ಸೇರ್ಪಡೆ ಮಾಡಿ, ಚಲಾವಣೆ ಮಾಡುವ ಜಾಲ ಸಕ್ರಿಯವಾಗಿರುವ ಅನುಮಾನವಿದೆ’ ಎಂದು ತಿಳಿಸಿವೆ.

‘₹2,000 ಮುಖಬೆಲೆ ನೋಟುಗಳ ಚಲಾವಣೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರದ್ದುಪಡಿಸಿದೆ. ಹಳೇ ನೋಟುಗಳನ್ನು ಬ್ಯಾಂಕ್ಗೆ ಪಾವತಿಸಲು ಹೇಳಿದೆ. ಇದೇ ಕಾರಣಕ್ಕೆ ಆರೋಪಿಗಳು, ಜೆರಾಕ್ಸ್ ನೋಟುಗಳನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ಇವುಗಳನ್ನು ಎಸೆದವರು ಯಾರು? ಅವರ ಉದ್ದೇಶವೇನು ? ಖೋಟಾ ನೋಟು ಜಾಲ ಸಕ್ರಿಯವಾಗಿದೆಯಾ? ಎಂಬುದನ್ನು ತಿಳಿಯಲು ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.