ಬೆಂಗಳೂರು: ಇಂಧನ ಇಲಾಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯಿರುವ ವಿಡಿಯೊ ಹರಿಬಿಟ್ಟ ಯೂಟ್ಯೂಬರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ಬೆಸ್ಕಾಂ ದೂರು ನೀಡಿದ್ದು, ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.

ಯೂಟ್ಯೂಬರ್ ಶೋಭಾ ಪ್ರಭಾಕರ್ ಎಂಬುವವರ ವಿರುದ್ಧ ಬೆಸ್ಕಾಂ ದೂರು ನೀಡಿದೆ. ‘ಶೋಭಾ ಪ್ರೈಮ್ ಟ್ಯೂಬ್ @ ಪ್ರೈಮ್ ಟ್ಯೂಬ್-ಶೋಭಾ’ ಎಂಬ ಚಾನಲ್ನಲ್ಲಿ, ಇಂಧನ ಇಲಾಖೆಗೆ ಸಂಬಂಧಿಸಿದ ಸುಳ್ಳು ಮಾಹಿತಿಗಳಿರುವ ಐದು ನಿಮಿಷದ ವಿಡಿಯೊ ತುಣುಕನ್ನು ಹರಿಬಿಟ್ಟಿದ್ದಾರೆ ಎಂದು ದೂರು ನೀಡಲಾಗಿದೆ.

ಆ ವಿಡಿಯೊದಲ್ಲಿ, ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫಾರ್ಮರ್ ಅಳವಡಿಸಿಕೊಂಡಿದ್ದರೆ ಸರ್ಕಾರ ದಿನಕ್ಕೆ ₹50 ಪರಿಹಾರ ನೀಡಲಿದೆ. ಗೃಹಬಳಕೆದಾರರು ಪ್ರತಿನಿತ್ಯ 2000 ರಿಂದ 5000 ಯೂನಿಟ್ ವಿದ್ಯುತ್ ಬಳಸಿಕೊಳ್ಳಬಹುದು. ಅದಕ್ಕೆ ಸರ್ಕಾರ ₹5000 ಪರಿಹಾರ ಧನ ನೀಡಲಿದೆ ಎಂಬ ಸಂದೇಶವಿದೆ.

ಯೂಟ್ಯೂಬ್ ಹಾಗೂ ಕೆಲ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೊ ಹರಿದಾಡುತ್ತಿದ್ದು, ಅದರಲ್ಲಿರುವ ಎಲ್ಲ ಹೇಳಿಕೆಗಳು ಸಂಪೂರ್ಣ ಸುಳ್ಳು ಮಾಹಿತಿಯಿಂದ ಕೂಡಿವೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.