ಬೆಂಗಳೂರು: ಭಾರತೀಯ ವಿದ್ಯಾಭವನ ನೀಡುವ ‘ಜಾಕಿಯಾ ಶಂಕರ್ ಪಾಠಕ್ ಪ್ರಶಸ್ತಿ’ಗೆ ಲೇಖಕಿ ವನಮಾಲಾ ವಿಶ್ವನಾಥ್ ಸೇರಿ ಮೂವರು ಆಯ್ಕೆಯಾಗಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿದ್ದ ಜಾಕಿಯಾ ಶಂಕರ್ ಪಾಠಕ್ ಸ್ಮರಣಾರ್ಥ ಅವರ ಕುಟುಂಬ ದತ್ತಿ ಸ್ಥಾಪಿಸಿದೆ. ಸಾಹಿತ್ಯ, ಶಿಕ್ಷಣ ಹಾಗೂ ವಿದ್ಯಾರ್ಥಿ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

ಸಾಹಿತ್ಯ ವಿಭಾಗದಲ್ಲಿ ಆಯ್ಕೆಯಾದ ವನಮಾಲಾ ವಿಶ್ವನಾಥ್, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ‘ಹರಿಶ್ಚಂದ್ರ ಕಾವ್ಯ’, ‘ಮಲೆಗಳಲ್ಲಿ ಮದುಮಗಳು’ ಸೇರಿ ಮುಂತಾದ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.

ಶಿಕ್ಷಣ ವಿಭಾಗದಲ್ಲಿ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಬನ್ನಿಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಎಚ್.ಎಂ. ವನಿತಾ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ವಿಭಾಗದಲ್ಲಿ ಬೆಂಗಳೂರಿನ ಶ್ರೀರಾಮಪುರದ ಭವನ್ ಬಿಬಿಎಂಪಿ ಶಾಲೆಯ ವಿದ್ಯಾರ್ಥಿನಿ ಪ್ರಿನ್ಸಿ ಬಿಲ್ಲಾ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿ ಸಾಹಿತ್ಯ ವಿಭಾಗದಲ್ಲಿ ₹ 10 ಸಾವಿರ, ಶಿಕ್ಷಣ ವಿಭಾಗದಲ್ಲಿ ₹ 5 ಸಾವಿರ ಹಾಗೂ ವಿದ್ಯಾರ್ಥಿ ವಿಭಾಗದಲ್ಲಿ ₹ 3 ಸಾವಿರ ನಗದು ಒಳಗೊಂಡಿದೆ.

ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್, ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್, ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಕೆ. ರಾವ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಅಭಿನವ ರವಿಕುಮಾರ್ ಅವರು ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದರು. ಮೇ ಕೊನೆಯ ವಾರ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.