ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಸತಿ ಯೋಜನೆ | ಶೀಘ್ರವೇ 38 ಸಾವಿರ ಮನೆ ಹಂಚಿಕೆ: ಸಚಿವ ಜಮೀರ್

Published 1 ಜುಲೈ 2024, 15:31 IST
Last Updated 1 ಜುಲೈ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಯೋಜನೆಗೆ ಆಯ್ಕೆಯಾಗಿದ್ದ ಬಡಕುಟುಂಬಗಳಿಗೆ ಎರಡನೇ ಹಂತದಲ್ಲಿ 38 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ವಸತಿ ಸಚಿವ ಬಿ.ಜೆಡ್‌. ಜಮೀರ್ ಅಹಮದ್ ಖಾನ್‌ ಹೇಳಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ಸಭೆಯನ್ನು ಸೋಮವಾರ ನಡೆಸಿದ ಅವರು, ‘ಎರಡನೇ ಹಂತದಲ್ಲಿ ಮನೆಗಳ ಹಂಚಿಕೆಗೆ ಅಗತ್ಯವಾದ ₹860 ಕೋಟಿ ಬಿಡುಗಡೆ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಮನೆಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೂಲಸೌಕರ್ಯ ಕಾಮಗಾರಿಗಳಷ್ಟೇ ಉಳಿದಿದೆ. ಅವನ್ನು ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ’ ಎಂದು ಹೇಳಿದರು.

ವಸತಿ ಯೋಜನೆಗೆ ಆಯ್ಕೆಯಾಗಿದ್ದ ಬಡಕುಟುಂಬಗಳ ಫಲಾನುಭವಿಗಳು ವಂತಿಗೆ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಜತೆಗೆ ಅವರಿಗೆ ಬ್ಯಾಂಕ್‌ಗಳಿಂದಲೂ ಸಾಲ ದೊರೆತಿರಲಿಲ್ಲ. ಹೀಗಾಗಿ ಫಲಾನುಭವಿಗಳ ವಂತಿಗೆಯನ್ನು ಸರ್ಕಾರವೇ ಭರಿಸುವ ನಿರ್ಧಾರವನ್ನು ಸಂಪುಟ ಸಭೆ ಕೈಗೊಂಡಿದೆ. ಹಣಕಾಸು ಇಲಾಖೆಯು ಹಂತ–ಹಂತವಾಗಿ ಹಣ ಬಿಡುಗಡೆ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT