ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಪಪ್ರಚಾರ ನಿಲ್ಲಿಸಿ, ಬಹಿರಂಗ ಕ್ಷಮೆಯಾಚಿಸಬೇಕು ಎಂದು ಜೆಡಿಎಸ್ ಮುಖಂಡ ಟಿ.ಎ. ಶರವಣ ಒತ್ತಾಯಿಸಿದರು.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋತು ಮನೆಯಲ್ಲಿ ಕುಳಿತಿದ್ದ ಜಮೀರ್ ಅಹಮ್ಮದ್ ಅವರನ್ನು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ದರಿದ್ರ ನಾರಾಯಣ ರ್ಯಾಲಿ ಮೂಲಕ ಗೆಲ್ಲಿಸಿ ತಂದಿದ್ದರು. ಈಗ ಜೆಡಿಎಸ್ ನಾಯಕರ ವಿರುದ್ಧವೇ ಕೀಳಾಗಿ ಮಾತನಾಡುತ್ತಿದ್ದಾರೆ’ ಎಂದು ದೂರಿದರು.

‘ಜೆಡಿಎಸ್ನಲ್ಲಿ ಇದ್ದಾಗ ಕುಮಾರಣ್ಣ ಎನ್ನುತ್ತಿದ್ದರು. ಈಗ ಕಾಂಗ್ರೆಸ್ನಲ್ಲಿ ಸಿದ್ದರಾಮಣ್ಣ ಎನ್ನುತ್ತಿದ್ದಾರೆ. ಓಲೈಕೆಗಾಗಿ ಇಂತಹ ಮಾತನಾಡುತ್ತಾರೆ. ಮುಂದೆ ಯಾರನ್ನು ಓಲೈಸಲು ಏನು ಹೇಳುತ್ತಾರೊ ಗೊತ್ತಿಲ್ಲ. ಈಗ ಕುಮಾರಸ್ವಾಮಿ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.