ಬೆಂಗಳೂರು: ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವಿಕೆ ಸೇರಿ ವಿವಿಧ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಝೀಕಾ ವೈರಾಣು ಬರದಂತೆ ತಡೆಯಬೇಕು. ಈ ರೋಗಕ್ಕೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಡೆಂಗಿ, ಚಿಕೂನ್ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳೇ ಝೀಕಾ ಸೋಂಕು ಸಹ ಹರಡುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ನಿಂತ ಸ್ವಚ್ಛ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿವೆ. ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಜ್ವರ, ತಲೆನೋವು ಸೇರಿ ವಿವಿಧ ಸೌಮ್ಯ ಲಕ್ಷಣಗಳು ಎರಡರಿಂದ ಏಳು ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ಈ ಜ್ವರಕ್ಕೆ ಒಳಗಾದಲ್ಲಿ ಜನಿಸಿದ ಶಿಶುವಿನ ತಲೆಯ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಹೇಳಿದೆ.

ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ, ಪರೀಕ್ಷೆ ಮಾಡುವ ಮೂಲಕ ವೈರಾಣು ಪತ್ತೆ ಮಾಡಲಾಗುತ್ತದೆ. ಇದರ ಬಗ್ಗೆ ಭಯಪಡುವ ಬದಲು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಝೀಕಾ ವೈರಾಣು ಸೋಂಕಿನ ಲಕ್ಷಣಗಳು:

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು, ಕೀಲು ಮತ್ತು ಸ್ನಾಯುಗಳಲ್ಲಿ ನೋವು

ರೋಗ ದೃಢಪಟ್ಟಲ್ಲಿ ಏನು ಮಾಡಬೇಕು?

ಝೀಕಾ ವೈರಾಣು ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ

ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು

ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಅಗತ್ಯ

ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸಬೇಕು

ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು

ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು

ಝೀಕಾ ವೈರಾಣು ಸೋಂಕು ಬೇರೆಯವರಿಗೆ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸಬೇಕು

ಮುಂಜಾಗ್ರತಾ ಕ್ರಮಗಳು ಏನು?

ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು

ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು

ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು

ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು

ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.