ಹುಮನಾಬಾದ್: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ಒಂಬತ್ತು ಕೈಗಾರಿಕೆಗಳನ್ನು ಮುಚ್ಚಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಸ್ಯೂಟಿಕ್ ಫಾರ್ಮಾ ಪ್ರೈವೇಟ್ ಲಿಮಿಟೆಡ್, ಸ್ಯೂಟಿಕ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್, ಕೆಎಸ್ಟಿ ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್, ಕ್ಷತ್ರಿಯ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್, ಪಯೋನಿರ್ ಇಂಡಸ್ಟ್ರೀಸ್, ನ್ಯೂ ಹಿಮಾಲಯ ಪ್ಲಾಸ್ಟಿಕ್ ಇಂಡಸ್ಟ್ರೀಸ್, 6 ಎಚ್ ಇಂಡಸ್ಟ್ರೀಸ್, ಎಂಕೆ ಇಂಡಸ್ಟ್ರೀಸ್ ಹಾಗೂ ಕೆಜಿಎನ್ ಇಂಡಸ್ಟ್ರೀಸ್ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸಬೇಕು. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಮಂಡಳಿಯು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.

ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಮೇಲಿನ ಕೈಗಾರಿಕೆಗಳನ್ನು 2023ರಲ್ಲಿ ಬಂದ್ ಮಾಡಿಸಲಾಗಿತ್ತು. ಕೆಲ ತಿಂಗಳ ನಂತರ ಮಂಡಳಿಯೇ ಅವುಗಳ ಕಾರ್ಯಾಚರಣೆಗೆ ಅನುಮತಿ ನೀಡಿತ್ತು.

ಮಾಲಿನ್ಯ ಉಂಟು ಮಾಡುತ್ತಿರುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಜೂನ್ 18ರಂದು ನಡೆದ ಕೆಡಿಪಿ ಸಭೆಯಲ್ಲಿ ಒತ್ತಾಯ ಕೇಳಿ ಬಂದಿತ್ತು. ಇದನ್ನು ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ಪರಿಸರ, ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದರು. ಅವರ ಸೂಚನೆ ಮೇರೆಗೆ ಮಂಡಳಿ ಅಧಿಕಾರಿಗಳು ಕೈಗಾರಿಕೆಗಳಿಗೆ ಭೇಟಿ ನೀಡಿ, ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಕೊಟ್ಟಿದ್ದು, ನಿಯಮ ಉಲ್ಲಂಘಿಸಲಾಗಿದೆ ಎಂದು ತಿಳಿಸಿದ್ದರು. ಆ ವರದಿಯನ್ನು ಆಧರಿಸಿ ಮಂಡಳಿಯು ಪುನಃ ಕೈಗಾರಿಕೆಗಳನ್ನು ಮುಚ್ಚಿಸಲು ಬುಧವಾರ (ಜುಲೈ 23) ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.