ಬೀದರ್: ಬಸ್ಗಳ ಸಂಖ್ಯೆ ಹೆಚ್ಚಿಸಿ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಉಸ್ತುವಾರಿ ಸಚಿವರ ಕಚೇರಿ ವರೆಗೆ ರ್ಯಾಲಿ ನಡೆಸಿದರು. ರ್ಯಾಲಿಯುದ್ದಕ್ಕೂ ಘೋಷಣೆಗಳನ್ನು ಕೂಗಿದರು.

‘ಶಕ್ತಿ’ ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳೆಯರ ಓಡಾಟ ಹೆಚ್ಚಾಗಿದ್ದು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ತುರ್ತಾಗಿ ಸರಿಪಡಿಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಬೇಕು. ಹಾಸ್ಟೆಲ್ಗಳಿಗೆ ಅರ್ಜಿ ಆಹ್ವಾನಿಸಿ, ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು. ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು. ಹಾಸ್ಟೆಲ್ಗಳ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡವನ್ನು ನೀಡಬೇಕು. ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ, ತಾಲ್ಲೂಕು ಸಂಚಾಲಕ ಮಹೇಶ, ನಗರ ಘಟಕದ ಕಾರ್ಯದರ್ಶಿ ಆನಂದ, ನಗರ ಸಹ ಕಾರ್ಯದರ್ಶಿ ಪವನ ಕುಂಬಾರ, ನಾಗರಾಜ್ ಸುಲ್ತಾನಪುರ, ಅಭಿಷೇಕ, ಶಂಭು, ಅಂಬರೀಶ ಬಿರಾದಾರ, ಪದ್ಮಾಕರ, ಕಾವೇರಿ ಮಠಪತಿ, ಮಮತಾ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.