ಬೀದರ್: ಬರುವ ಜನವರಿ 26ಕ್ಕೆ ಉಡಾನ್ ಯೋಜನೆಯಡಿ ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಆರಂಭವಾಗಲಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ನನ್ನ ಮನವಿಗೆ ಸ್ಪಂದಿಸಿ ನವದೆಹಲಿಯಲ್ಲಿ ಮಂಗಳವಾರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಪ್ರದೀಪ್ಸಿಂಗ್ ಖಲೋರಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಇದ್ದ ತೊಡಕುಗಳನ್ನು ನಿವಾರಿಸಲಾಗಿದೆ. ಬೀದರ್ನಿಂದ ಬೆಂಗಳೂರಿಗೆ ಮೊದಲ ವಿಮಾನ ಹಾರಾಟ ನಡೆಸಲಿದೆ ಎಂದು ಹೇಳಿದ್ದಾರೆ.

ವಿಮಾನಯಾನ ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರ ಈಗಾಗಲೇ ಅಗತ್ಯ ಅನುದಾನ ಮಂಜೂರು ಮಾಡಿದೆ. ನಾಗರಿಕ ವಿಮಾನಯಾನದ ಬೀದರ್ ಜನರ ಬಹು ದಿನಗಳ ಕನಸು ನನಸಾಗಿಸಲು ಸತತ ಕಾರ್ಯಪ್ರವತ್ತನಾಗಿದ್ದೇನೆ ಎಂದು ಹೇಳಿದ್ದಾರೆ.

ನಾಗರಿಕ ವಿಮಾನಯಾನ ಸೇವೆ ಆರಂಭದಿಂದ ಪ್ರವಾಸೋದ್ಯಮ, ವ್ಯಾಪಾರ, ಶಿಕ್ಷಣ ಕ್ಷೇತ್ರದ ಬೆಳವಣಿಗೆ ಕ್ಷಿಪ್ರಗತಿಯಲ್ಲಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.