ಹುಮನಬಾದ್: ಬಿಸಿಯೂಟ ನೌಕರರನ್ನು ಖಾಯಂ ಮಾಡಿ, ಶಾಸನಾತ್ಮಕ ಸವಲತ್ತುಗಳನ್ನು ಜಾರಿ ಮಾಡುವುದೂ ಸೇರಿದಂತೆ ಇತರೆ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಬುಧವಾರ ಶಾಸಕ ರಾಜಶೇಖರ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮಂಜುಳಾ ಹಾಲಹಳ್ಳಿ, ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್. ತಾಲ್ಲೂಕು ಘಟಕದ ಉಪಾಧ್ಯಕ್ಷೆ ಜಯಶ್ರೀ ಜಾಧವ, ಕೋಶಾಧ್ಯಕ್ಷೆ ಆರತಿ ಮೇಲಕೇರಿ, ಮಾತನಾಡಿ ಬಿಸಿಯೂಟ ನೌಕರರಿಗೆ ಏಪ್ರಿಲ್ ತಿಂಗಳಿಂದ ಶಾಲೆ ಪ್ರಾರಂಭ ಆಗುವವರೆಗೆ ವೇತನ ಪಾವತಿ ಮಾಡಬೇಕು. ಮುಂದಿನ ಆರು ತಿಂಗಳವರೆಗೆ ಪಡಿತರ ಸೇರಿದಂತೆ ₹ 7500 ಸಹಾಯಧನ ಒದಗಿಸಬೇಕು ಎಂದು ಕೋರಿದರು.

ಬಿಸಿಯೂಟ ನೌಕರರಿಗೆ ಎಲ್‍ಐಸಿ ಆಧಾರಿತ ಪೆನ್ಸನ್ ನಿಗದಿ ಮಾಡಬೇಕು. ಕ್ವಾರಂಟೈನ್ ಕೇಂದ್ರದಲ್ಲಿದ್ದವರಿಗೆ ಅಡುಗೆ ಮಾಡಿ ಬಡಿಸುತ್ತಿರುವ ನೌಕರರಿಗೆ ವೇತನ ಪಾವತಿಸಬೇಕು. ಮತ್ತು ಐಎಲ್‍ಸಿ ಶಿಫಾರಸುಗಳನ್ನು ಕೂಡಲೇ ಜಾರಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

‘ಅಕ್ಷರ ದಾಸೋಹ ನೌಕರರ ಸಾಕಷ್ಟು ಕಷ್ಟದಲ್ಲಿದ್ದಾರೆ. ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಸರ್ಕಾರ ಮೇಲೆ ಒತ್ತಡ ಹೇರಲಾಗುವುದು. ಕ್ಷೇತ್ರದದಲ್ಲಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆ ನಿವಾರಣೆಗೆ ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದುಶಾಸಕ ರಾಜಶೇಖರ ಪಾಟೀಲ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.