ಔರಾದ್: ಇಲ್ಲಿಯ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೆ.6ರಂದು ಚುನಾವಣೆ ನಿಗದಿಯಾಗಿದೆ.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಎರಡೂ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಒಟ್ಟು 20 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ 12 ಬಿಜೆಪಿ, 6 ಕಾಂಗ್ರೆಸ್, ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕಳೆದ ಅವಧಿಯಲ್ಲಿ ಬಿಜೆಪಿಯ ಅಂಬಿಕಾ ಕೇರಬಾ ಪವಾರ್ ಅಧ್ಯಕ್ಷ, ಸಂತೋಷ ಪೋಕಲವಾರ ಉಪಾಧ್ಯಕ್ಷರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಸರಸ್ವತಿ ಘುಳೆ, ರಾಧಾಬಾಯಿ ನರೋಟೆ ಪೈಪೋಟಿಯಲ್ಲಿದ್ದು, ಕೊನೆ ಘಳಿಗೆಯಲ್ಲಿ ಬೇರೆಯವರು ಕೂಡ ಬರಬಹುದು. ಇಲ್ಲಿ ಶಾಸಕ ಪ್ರಭು ಚವಾಣ್ ಅವರ ತೀರ್ಮಾನವೇ ಅಂತಿಮವಾಗಿದ್ದು, ಅವರು ಸೂಚಿಸಿದ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗುತ್ತಾರೆ ಎಂದು ಆ ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಆಕ್ಷೇಪ: ಕೆಲ ಸದಸ್ಯರು ಕಾಂಗ್ರೆಸ್ ಚಿಹ್ನೆ ಮೇಲೆ ಗೆದ್ದು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಇಂತಹ ಸದಸ್ಯರ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಹ ಸಂಚಾಲಕ ಸುಧಾಕರ ಕೊಳ್ಳೂರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.