ಬೀದರ್: ಮಳಿಗೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಕೆ ಕಡ್ಡಾಯದ ಕುರಿತು ಜಾಗೃತಿ ಮೂಡಿಸಲು ನಗರದಲ್ಲಿ ಬುಧವಾರ ಸಂಜೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭಗೊಂಡ ಜಾಥಾ ಮೀನಾ ಬಜಾರ್, ರೋಟರಿ ವೃತ್ತ, ಮಡಿವಾಳ ವೃತ್ತ, ವೆಂಕಟೇಶ್ವರ ಮಾಲ್, ಬಸ್ ನಿಲ್ದಾಣ, ಶಿವನಗರದ ಮಾರ್ಗವಾಗಿ ಮೂಲ ಸ್ಥಳದಲ್ಲಿ ಕೊನೆಗೊಂಡಿತು. ಆಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸಿದ ಮಳಿಗೆಗಳ ಮಾಲೀಕರಿಗೆ ಸರ್ಕಾರದ ಆದೇಶದ ಕುರಿತು ವಿವರಿಸಲಾಯಿತು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ-2024ರ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯಲ್ಲಿ ಶೇ60ರಷ್ಟು ಕಡ್ಡಾಯವಾಗಿ ಬರೆಸಬೇಕು ಎಂದು ಶಿವಕುಮಾರ ಶೀಲವಂತ ಹೇಳಿದರು.

ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಡಿವೈಎಸ್ಪಿ ಶಿವನಗೌಡ ಪಾಟೀಲ, ಸಿಪಿಐ ವಿಜಯಕುಮಾರ ಭಾವನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ, ಕನ್ನಡ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪೀಟರ ಚಿಟಗುಪ್ಪ, ಮುಖಂಡರಾದ ರೇವಣಸಿದ್ದಪ್ಪ ಜಲಾದೆ, ವಿರುಪಾಕ್ಷ ಗಾದಗಿ, ಎಂ.ಎಸ್.ಮನೋಹರ, ಸಂತೋಷ ಜೋಳದಾಬಕೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.